filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.4422224, 0.44300014);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36; 
ಜಿಲ್ಲೆ

ಒಳಮೀಸಲು ಜಾರಿಗೆ ಆಗ್ರಹಿಸಿ ತಮಟೆ ಸದ್ದು

ಚಿತ್ರದುರ್ಗ: ಒಳಮೀಸಲು ಜಾರಿಗೊಳಿಸಲು ರಾಜ್ಯದ ಸಿಎಂ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಪದಾಧಿಕಾರಿಗಳು, ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿದರು. ಪ್ರವಾಸಿ ಮಂದಿರದಿಂದ ಒನಕೆ ಓಬವ್ವ ವೃತ್ತದವರೆಗೂ ತಮಟೆ ಚಳವಳಿಯೊಂದಿಗೆ ಮೆರವಣಿಗೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಒಳಮೀಸಲಾತಿ ಜಾರಿಗೊಳಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ಸಂಚಾಲಕ ಕೆಂಗುಂಟೆ ಜಯಣ್ಣ ಮಾತನಾಡಿ, ಕರ್ನಾಟಕ, ಪಂಜಾಬ್, ಹರಿಯಾಣ, ಬಿಹಾರ, ತಮಿಳುನಾಡು, ಆಂಧ್ರ ಪ್ರದೇಶ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಸಾಕಷ್ಟು ಹೋರಾಟಗಳು ನಡೆದ ಫಲವಾಗಿ ಎಸ್ಸಿಯೊಳಗಿನ ಉಪ ಜಾತಿಗಳಿಗೆ ಒಳಮೀಸಲಾತಿ ನೀಡುವ ಅಧಿಕಾರ ಆಯಾ ರಾಜ್ಯಗಳಿಗಿದೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಕೂಡಲೇ ಸ್ಪಂದಿಸದಿದ್ದರೆ, ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ 25 ಸಾವಿರ ಕೋಟಿ ರೂ. ಅನುದಾನವನ್ನು ಉಚಿತ ಗ್ಯಾರಂಟಿ ಯೋಜನೆಗಳಿಗೆ ಬಳಸಿ ಸಮುದಾಯಗಳಿಗೆ ದ್ರೋಹ ಎಸಗಿರುವುದರಿಂದ ಸಮಾಜ ಕಲ್ಯಾಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. 30 ವರ್ಷದ ಹೋರಾಟದ ಫಲವಾಗಿರುವ ಒಳಮೀಸಲು ಜಾರಿಗೆ ಕ್ರಮವಹಿಸದಿದ್ದಲ್ಲಿ ರಾಜೀನಾಮೆ ನೀಡಿ ಎಂದು ಸಿಎಂಗೂ ಒತ್ತಾಯಿಸಿದರು.

ಪದಾಧಿಕಾರಿಗಳಾದ ನಾಗೇಂದ್ರಪ್ಪ, ಬಸವರಾಜ್, ಕರಿಬಸಪ್ಪ, ಆರ್.ವೀರಭದ್ರಸ್ವಾಮಿ, ಶ್ರೀನಿವಾಸಮೂರ್ತಿ, ರಘುನಾಥ್, ವಿಜಯಕುಮಾರ್, ಸುಂದರಮೂರ್ತಿ, ಶಿವಣ್ಣ ಮುತ್ತುಗದೂರು, ನವೀನ್ ಮದ್ದೇರು, ಗುಂಡಿಮಡು ಮಂಜಣ್ಣ, ವಿಶ್ವನಾಥಹಳ್ಳಿ ಮಂಜಣ್ಣ, ಆರ್.ರುದ್ರಮುನಿ, ಕರಿಯಪ್ಪ, ಗುರುಮೂರ್ತಿ, ಡಿ.ಓ.ಮುರಾರ್ಜಿ ಇತರರಿದ್ದರು.