ಜಿಲ್ಲೆ

ಓದಿನ ಜತೆ ಕ್ರೀಡೆಯಲ್ಲೂ ಸಾಧನೆ ಮಾಡಿ

ಚಾಮರಾಜನಗರ: ಪ್ರಸ್ತುತ ಕ್ರೀಡೆಯಲ್ಲಿ ಸಾಧನೆ ಮಾಡಲು ವ್ಯಾಪಕ ಅವಕಾಶಗಳು ಇದ್ದು, ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡೆಗಳತ್ತಾ ಮುಖ ಮಾಡಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಸಚಿವ ಆರ್.ಲೋಕನಾಥ್ ಸಲಹೆ ನೀಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯದ ವತಿಯಿಂದ ಗುರುವಾರ ಆಯೋಜಿಸಿದ್ದ ಅಂತರ ಕಾಲೇಜುಗಳ ಕ್ರೀಡಾಕೂಟ ಸಮರೋಪ ಸಮಾರಂಭದಲ್ಲಿ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಆಗಾಗಿ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವವನ್ನು ಎಲ್ಲಾ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಕ್ರೀಡೆ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿದೆ. ಇತ್ತೀಚಿಗೆ ನಮ್ಮ ಮೈಸೂರಿನ ಟಿ.ನರಸೀಪುರ ಗ್ರಾಮೀಣ ಪ್ರತಿಭೆ ಖೋಖೋ ವಿಶ್ವಕಪ್‌ನಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಅದರಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಧನೆ ಮಾಡಬೇಕು ಎಂದರು.

ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಶಾಂತರಾಜು ಮಾತನಾಡಿ, ಚಾಮರಾಜನಗರ ವಿಶ್ವವಿದ್ಯಾಲಯ ವತಿಯಿಂದ ರಾಜ್ಯ ಮತ್ತು ಅಂತರಾಜ್ಯ ಕ್ರೀಡಾಕೂಟದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿ ಸಮಗ್ರ ಬಹುಮಾನಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತ ಜಿ.ಬಂಗಾರು, ಕ್ರೀಡಾಪಟು ಕಾರ್ತಿಕ್ ನಾಯಕ್, ಕೊಳ್ಳೇಗಾಲ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜಯಶಂಕರ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವ ಡಾ.ವಿ.ಜಿ.ವೆಂಕಟರಮಣ,

ಉಪನ್ಯಾಸಕ ಶೈಲೇಂದ್ರ ಕುಮಾರ್ ಹಾಗೂ ಇತರರು ಹಾಜರಿದ್ದರು.