ಜಿಲ್ಲೆ

ಓಬವ್ವ ಜಯಂತಿ ಅದ್ದೂರಿ ಆಚರಣೆ

Yadgiri - Laxmikanth Kulkarni


ಯಾದಗಿರಿ: ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ತಿಳಿಸಿದರು.

ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ನ.11ರಂದು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಅಧಿಕಾರಿಗಳು ವಹಿಸದ ಜವಾಬ್ದಾರಿಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿ ಎಲ್ಲ ರೀತಿಯ ಸೌಕರ್ಯ ಒದಗಿಸಬೇಕು. ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ಸಮಾರಂಭದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದರು.