ಜಿಲ್ಲೆ

ಓಬವ್ವಳ ಚರಿತ್ರೆ ಮುಂದಿನ ಪೀಳಿಗೆಗೆ ಆದರ್ಶ

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅನಿಸಿಕೆ |

 ಚಿಕ್ಕಬಳ್ಳಾಪುರ : ವೀರವನಿತೆ ಒನಕೆ ಓಬವ್ವಳ ಸಾಹಸ ಚರಿತ್ರೆಯು ಮುಂದಿನ ಪೀಳಿಗೆಗೆ ಆದರ್ಶವಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ನಗರದ ಅಂಬೇಡ್ಕರ್ ಸರ್ಕಾರಿ ಪದವಿ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸೋಮವಾರ ಹಮ್ಮಿಕೊಂಡಿದ್ದ ವೀರವನಿತೆ ಒನಕೆ ಓಬವ್ವ ಜಯಂತ್ಯುತ್ಸವದಲ್ಲಿ ವಾತನಾಡಿದ ಅವರು, ಒನಕೆ ಓಬವ್ವರ ಹೆಸರು ಕರ್ನಾಟಕದ ಇತಿಹಾಸದಲ್ಲಿ ಮರೆಯಲಾಗದ ಒಂದು ಸಾಹಸ ಚರಿತ್ರೆ. ಇವರನ್ನು ಕಿತ್ತೂರಿನ ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಪರಿಗಣಿಸಲಾಗಿದೆ ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲು ಪೊಲೀಸ್ ಇಲಾಖೆಯಲ್ಲಿ ವಿಶೇಷವಾಗಿ ಓಬವ್ವ ಪಡೆಯನ್ನು ರಚಿಸಲಾಗಿದೆ. ಇದರ ಮೂಲಕ ಸೀ ರಕ್ಷಣೆ ಮತ್ತು ಆತ್ಮಸ್ಥೈರ್ಯ ತುಂಬುವ ಕೆಲಸವಾಗುತ್ತಿದೆ ಎಂದರು.

ಉಪನ್ಯಾಸಕ ಅರಿಕೆರೆ ಎಂ.ಮುನಿರಾಜು ವಾತನಾಡಿ, ಓಬವ್ವ ರಾಜ್ಯದ ಕೋಶಕ್ಕಾಗಿ, ಪಟ್ಟ, ಪದವಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಡಲಿಲ್ಲ. ಬದಲಿಗೆ ಕಾಯಕಕ್ಕೆ ಕಳಂಕ ಬಾರದಿರಲು, ಧಣಿಗೆ ಸೋಲಾಗಬಾರದು, ಕೋಟೆ ಹೈದರಾಲಿ ವಶವಾಗಬಾರದು ಎಂಬ ನಿಸ್ವಾರ್ಥದ ನಾಡ ಪ್ರೇಮವೇ ಪ್ರಮುಖ ಉದ್ದೇಶ ಎಂದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳು, ಸರ್ಕಾರಿ ನಿವೃತ್ತ ನೌಕರರು ಮತ್ತು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಉಪಾಧ್ಯಕ್ಷ ನಾಗರಾಜು, ಜಿ.ಪಂ.ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಎನ್.ಭಾಸ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿ ಕುವಾರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ತಹಸೀಲ್ದಾರ್ ಅನಿಲ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ್ ರೆಡ್ಡಿ, ಸವಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಷಾದ್ರಿ, ಮುಖಂಡರಾದ ಸು.ಧಾ.ವೆಂಕಟೇಶ್, ಮಮತಾ ಮೂರ್ತಿ ಮತ್ತಿತರರು ಇದ್ದರು.

ಅದ್ದೂರಿ ಮೆರವಣಿಗೆ

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಒನಕೆ ಓಬವ್ವಳ ಹೂವಿನ ಪಲ್ಲಕ್ಕಿ ಮತ್ತು ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಿತು. ಜಾನಪದ ಕಲಾ ತಂಡಗಳೊಂದಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂಭಾಗದಿಂದ ಆರಂಭಗೊಂಡು, ಎಂ.ಜಿ ರಸ್ತೆಯ ಸಮೀಪದ ಜೈ ಭೀಮ್ ವಿದ್ಯಾರ್ಥಿ ನಿಲಯದ ಬಳಿ ಮುಕ್ತಾಯಗೊಂಡಿತು. ಸಂವಿಧಾನ ಶಿಲ್ಪಿ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.