ತರೀಕೆರೆ: ಉಡೇವಾ ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಸಲಗವೊಂದು ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.
ಬುಧವಾರ ಸಂಜೆ ಉಡೇವಾ ಸಮೀಪದ ಅರಣ್ಯ ಪ್ರದೇಶದಲ್ಲಿ ತೋಡಿರುವ ಕಂದಕವನ್ನು ದಾಟುವಾಗ ಆನೆ ಕಂದಕದ ಮೇಲೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಲಗ ಸತ್ತಿರಬಹುದು ಎಂದು ಅಂದಾಜಿಸಲಾಗಿದೆ. ಮಾಹಿತಿ ತಿಳಿದ ಆರ್‌ಎಫ್‌ಒ ಆಸೀಫ್ ಅಹಮದ್ ನೇತೃತ್ವದ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಡಿ.26ರಂದು ಮೇಲಾಧಿಕಾರಿಗಳ ಸಮ್ಮುಖದಲ್ಲಿ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.