ಹಾಸನ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ನಿರುದ್ಯೋಗ ಯುವಕ-ಯವತಿಯರಿಗೆ 3000 ಭತ್ಯೆ, ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ, ಮಹಿಳೆಯರಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ಪಾಸ್, ಮಹಿಳೆಯರಿಗೆ 2 ಸಾವಿರ ಭತ್ಯೆ ನೀಡಲಾಗುವುದು. ನಮ್ಮ ಹಸ್ತದಲ್ಲಿ ಇರುವ ಐದು ಬೆರಳಿನಂತೆ ಕಾಂಗ್ರೆಸ್ ಐದು ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬನವಾಸೆ ರಂಗಸ್ವಾಮಿ ಅವರು ಹೇಳಿದರು.
ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ತಾಲೂಕಿನ ಕಂದಲಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬನವಾಸೆ ರಂಗಸ್ವಾಮಿ ಅವರು ಪಕ್ಷದ ಮುಖಂಡರೊಂದಿಗೆ ನೂರಾರು ಸಂಖ್ಯೆ ಕಾರ್ಯಕರ್ತರು ಜತೆಗೆ ಮಂಗಳವಾರ ಚುನಾವಣಾ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಹೋದ ಕಡೆಯಲೆಲ್ಲ ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರು. ಇದೇ ವೇಳೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಐದು ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿ ಮತಯಾಚಿಸಿದರು.
ಈ ಬಾರಿ ನೀವು ನನಗೆ ಅಧಿಕಾರ ನೀಡಿದರೆ ಈ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಹಾಗೂ ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ದೇವರಾಜು, ಹೇಮಣ್ಣ, ವೆಂಕಟೇಗೌಡ, ಬೂದೇಶ್, ಜಗದೀಶ್ ಸೇರಿ ನೂರಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.