ಜಿಲ್ಲೆ

ಕಚೇರಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಡಿಸಿ ಸೂಚನೆ

ಚಿತ್ರದುರ್ಗ: ಬೇಸಿಗೆಯಲ್ಲಿ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹವಾಮಾನ ಇಲಾಖೆ ದೈನಂದಿನ ವರದಿಗಳ ಅನುಸಾರ ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಉಷ್ಣತೆ ಸರಾಸರಿ 38-40 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗಿದ್ದು, ಬಿಸಿಗಾಳಿ ಮುಂದುವರೆದಿದೆ. ನಿಯಮಿತವಾಗಿ ಶುದ್ಧ ಕುಡಿಯುವ ನೀರು ಸೇವನೆಯಿಂದ ನಿರ್ಜಲೀಕರಣ ತಪ್ಪಿಸಬಹುದು. ಆದ್ದರಿಂದ ಕಚೇರಿಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ತಪ್ಪದೆ ಕಲ್ಪಿಸಬೇಕೆಂದು ಸೂಚಿಸಿದ್ದಾರೆ.

-----