ಕೊಟ್ಟಿಗೆ ಛಾವಣಿ ಕುಸಿದ ಪರಿಣಾಮ ಹಸು ಮೃತಪಟ್ಟಿರುವುದು. 
ಜಿಲ್ಲೆ

ಕೊಟ್ಟಿಗೆ ಛಾವಣಿ ಕುಸಿದು ಹಸು ಸಾವು

ಕುಶಾಲನಗರ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಕೂಡಿಗೆ ಗ್ರಾಪಂ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದ ಕೃಷ್ಣೇಗೌಡ ಎಂಬವರಿಗೆ ಸೇರಿದ ಕೊಟ್ಟಿಗೆಯ ಛಾವಣಿ ಸೇರಿದಂತೆ ಗೋಡೆ ಸಂಪೂರ್ಣವಾಗಿ ಕುಸಿದ ಪರಿಣಾಮ 70 ಸಾವಿರ ರೂ. ಮೌಲ್ಯದ ಹಸು ಮೃತಪಟ್ಟಿದೆ.

ಸ್ಥಳಕ್ಕೆ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಅರುಣ್‌ರಾವ್, ಕಂದಾಯ ಪರಿವೀಕ್ಷಕ ಸಂತೋಷ್, ಲೆಕ್ಕಾಧಿಕಾರಿ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.