ಜಿಲ್ಲೆ

ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಸಮ್ಮೇಳನ ಜು.9ರಂದು

ಎಐಯುಟಿಯುಸಿಗೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಸಮ್ಮೇಳನ ಜುಲೈ 9 ರಂದು ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಟ್ಟಡ ಕಾರ್ಮಿಕರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಾದ ಶೈಕ್ಷಣಿಕ ಸಹಾಯಧನ ಕಡಿತ, ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಆಗುತ್ತಿರುವ ಅವ್ಯವಹಾರಗಳು, ಹಣ ಪೋಲು ಸೇರಿ ಹಲವಾರು ವಿಷಯಗಳು, ಕಟ್ಟಡ ಕಾರ್ಮಿಕರ ಅನೇಕ ಬೇಡಿಕೆಗಳ ಕುರಿತು ಚರ್ಚಿಸಲಾಗುತ್ತದೆ. ಸಮ್ಮೇಳನದ ಪ್ರತಿನಿಧಿ ಅಧಿವೇಶನದಲ್ಲಿ ಕಟ್ಟಡ ಕಾರ್ಮಿಕರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಾದ ಶೈಕ್ಷಣಿಕ ಸಹಾಯಧನದಲ್ಲಿ ಶೇ.60-70ರಷ್ಟು ಕಡಿತ ಹಾಗೂ ಶೈಕ್ಷಣಿಕ ಸಹಾಯಧನ ನೀಡುವಲ್ಲಿ ವಿಳಂಬ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಆಗುತ್ತಿರುವ ಅವ್ಯವಹಾರಗಳು, ಹಣದ ಪೋಲು ಇಂತಹ ಅನೇಕ ಸಮಸ್ಯೆಗಳ ಕುರಿತು ಹಾಗೂ ಕಟ್ಟಡ ಕಾರ್ಮಿಕರ ಅನೇಕ ಬೇಡಿಕೆಗಳ ಕುರಿತು ಈ ಸಮ್ಮೇಳನದಲ್ಲಿ ಚರ್ಚಿಸಿ, ಮುಂದಿನ ಹೋರಾಟವನ್ನು ರೂಪಿಸಲಾಗುವುದು. ಅಲ್ಲದೆ ಸರ್ಕಾರಗಳ ಕಾರ್ಮಿಕ ವಿರೋಧಿ ಹಾಗೂ ಬಂಡವಾಳಶಾಹಿ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ಸಂಘಟನೆಯನ್ನು ಸಜ್ಜುಗೊಳಿಸುವ ಉದ್ದೇಶದಿಂದ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದು ವಿವರಿಸಿದರು.