ಜಿಲ್ಲೆ

ಕಟ್ಟಡ ಕಾರ್ವಿುಕರಿಗೆ ಟೂಲ್ಸ್ ಕಿಟ್ ವಿತರಣೆ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಧಾರವಾಡ ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ವಿುಕರಿಗೆ ಟೂಲ್ಸ್ ಕಿಟ್, ಅಸಂಘಟಿತ ಕಾರ್ವಿುಕರಿಗೆ ಅಪಘಾತ ಪರಿಹಾರ ಧನ ಸಹಾಯ ಹಾಗೂ ವಿವಿಧ ಕಾರ್ವಿುಕ ಕಾಯ್ದೆಗಳಡಿ ಕಾರ್ವಿುಕರಿಗೆ ಮಂಜೂರಾದ ಚೆಕ್ ಮತ್ತು ನೋಂದಣಿ ಪ್ರಮಾಣ ಪತ್ರಗಳ ವಿತರಣೆ ಕಾರ್ಯಕ್ರಮ ಡಿ. 7ರಂದು ಬೆಳಗ್ಗೆ 11ಗಂಟೆಗೆ ಗೋಕುಲ ರಸ್ತೆಯ ಗೋಕುಲ ಗಾರ್ಡನ್​ನಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಕಾರ್ವಿುಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ವಿುಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ವಿುಕರ ಸಾಮಾಜಿಕ ಭದ್ರತಾ ಮಂಡಳಿಗಳ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ನಿಗಮ-ಮಂಡಳಿಗಳ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ, ವಿನಯ ಕುಲಕರ್ಣಿ, ಭರಮಗೌಡ (ರಾಜು) ಅಲಗೌಡ ಕಾಗೆ, ಜೆ.ಎಂ.ಗಣೇಶ ಪಾಲ್ಗೊಳ್ಳುವರು. ಶಾಸಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸುವರು ಕಾರ್ವಿುಕ ಇಲಾಖೆಯ ಸಹಾಯಕ ಕಾರ್ವಿುಕ ಆಯುಕ್ತೆ ಶ್ವೇತಾ ಎಸ್. ತಿಳಿಸಿದ್ದಾರೆ.