ಹಾಸನ : ತಾಲ್ಲೂಕಿನ ಕಟ್ಟಾಯ ಗ್ರಾಮದಲ್ಲಿ ರಸ್ತೆ ಪಕ್ಕದ ಜಮೀನಿನಲ್ಲಿ ಶನಿವಾರ ಹಾಡುಹಗಲೇ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಚಿರತೆ ರಸ್ತೆ ಪಕ್ಕದಲ್ಲಿ ಕುಳಿತಿರುವ ದೃಶ್ಯವನ್ನು ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲ್ಲಿ ಹರಿಬಿಟ್ಟಿದ್ದಾರೆ. ಆಹಾರಕ್ಕಾಗಿ ಅಲೆದಾಡುತ್ತಿದ್ದ ಚಿರತೆ ಕಟ್ಟಾಯ ಗ್ರಾಮದ ಸುತ್ತ ಮುತ್ತ ಹಗಲಿನ ವೇಳೆಯಲ್ಲೇ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದರಿಂದ ದನ-ಕುರಿ ಮೇಯಿಸುವವರು, ಜಮೀನಿಗೆ ತೆರಳುವ ಗ್ರಾಮಸ್ಥರು ಭಯಭೀತರಾಗಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೋನು ಇಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.