ಬಾಗಲಕೋಟೆ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಶೇ.೫೦ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿದ ಇಲಾಖಾ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಜನವರಿ ೨೦೨೫ ಜನೆವರಿ ಅಂತ್ಯದವರೆಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸದರಿ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ತಿಳಿಸಿದರು.
ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಯಾವುದೇ ರೀತಿ ಹಿಂದಕ್ಕೆ ಹೋಗದಂತೆ ನೋಡಿಕೊಳ್ಳಬೇಕು. ಮಾರ್ಚ ೩೧ ರೊಳಗಾಗಿ ಬಿಡುಗಡೆಯಾದ ಅನುದಾನ ಸಂಪೂರ್ಣವಾಗಿ ಬಳಕೆ ಮಾಡಿಕೊಂಡು ನೂರಕ್ಕೆ ನೂರರಷ್ಟು ಪ್ರಗತಿ ಸಾಽಸಲು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ, ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಆಯಾ ಇಲಾಖೆಗೆ ಹಂಚಿಕೆಯಾದ ಅನುದಾನ ಕಾಲಮಿತಿಯಲ್ಲಿ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಽಸುವ ಮೂಲಕ ಸರ್ಕಾರದ ಸೌಲಭ್ಯವನ್ನು ಎಸ್ಸಿ, ಎಸ್.ಟಿ ಸಮುದಾಯದ ಜನರಿಗೆ ತಲುಪಿಸುವ ಕೆಲಸವಾಗಬೇಕು. ಕೃಷಿ ಇಲಾಖೆ ಮೂಲಕ ಬೀಜಗಳ ಪೂರೈಕೆ ಕಾರ್ಯಕ್ರಮ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಕೃಷಿ ಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ನೀಡಬೇಕು ಎಂದು ಹೇಳಿದರು.
ಶಿಕ್ಷಣ, ಆರೋಗ್ಯ, ತೋಟಗಾರಿಕೆ, ರೆಷ್ಮೆ, ಪಶುಸಂಗೋಪನೆ, ಪ್ರವಾಸೋದ್ಯಮ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿ ಸಂಬAಽಸಿದ ಇಲಾಖಾ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕವಿತಾಳ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.