ಕಡೂರು: ಪಟ್ಟಣದಲ್ಲಿ ಬುಧವಾರ ಸಂಜೆ ಅರ್ಧಗಂಟೆಗೂ ಹೆಚ್ಚುಕಾಲ ವರ್ಷಧಾರೆಯಾಯಿತು. ಭಾರಿ ಮಳೆಯಿಂದ ಯು.ಬಿ.ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದು ಕೆಲಕಾಲ ವಾಹನ ಸವಾರರು ಪರದಾಡಿದರು. ರಸ್ತೆ ಬದಿ ತಗ್ಗು ಪ್ರದೇಶಗಳಲ್ಲಿ ನಿಲ್ಲಿಸಿದ್ದ ಕಾರು ಮತ್ತು ಬೈಕುಗಳು ಭಾಗಶಃ ಮುಳುಗಿದ್ದವು. ಪಟ್ಟಣದ ಶ್ರೀ ಚಂದ್ರಮೌಳೇಶ್ವರ ದೇವಾಲಯ ರಸ್ತೆ ಸಂಪೂರ್ಣ ಜಲಾವೃತವಾಗಿತ್ತು. ತಾಲೂಕಿನಾದ್ಯಂತ ಬುಧವಾರ ಸಂಜೆ ಧಾರಾಕಾರವಾಗಿ ಮಳೆಯಾಗಿದೆ.