ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವತಿಯಿಂದ ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು. ಪಿಡಿಒ ನಂಜುಂಡಸ್ವಾಮಿ, ಕಚೇರಿ ನೌಕರರು ಇದ್ದರು. 
ಜಿಲ್ಲೆ

ಕಡ್ಡಾಯವಾಗಿ ಮತದಾನ ಮಾಡಿ

ಹನೂರು: ಪ್ರತಿಯೊಂದು ಮತವು ಅತ್ಯಮೂಲ್ಯವಾದುದು. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಪಿಡಿಒ ನಂಜುಂಡಸ್ವಾಮಿ ತಿಳಿಸಿದರು.

ತಾಲೂಕಿನ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವತಿಯಿಂದ ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾನವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ಪ್ರಬಲ ಅಸ್ತ್ರವಾಗಿದ್ದು, ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಈ ದಿಸೆಯಲ್ಲಿ ಶೇ.100ರಷ್ಟು ಗುರಿಯನ್ನು ಸಾಧಿಸಬೇಕಿದೆ. ಆದ್ದರಿಂದ ಪ್ರತಿಯೊಬ್ಬರೂ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಕಡ್ಡಾಯವಾಗಿ ಮತ ಚಲಾಯಿಸಬೇಕಿದೆ. ಮತದಾನವನ್ನು ಹಬ್ಬವಾಗಿ ಅಚರಿಸಿ ಖುಷಿ ಪಡಬೇಕಿದೆ ಎಂದು ತಿಳಿಸಿದರು.

ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ತೆರಳಿ ಕೂಲಿ ಕಾರ್ಮಿಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ನೌಕರರು ಇದ್ದರು.