ಆಲೂರು ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಿಂಗರಾಜು ಹಾಗೂ ಉಪಾಧ್ಯಕ್ಷರಾಗಿ ರಾಧಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಜೇಗೌಡ, ನಟರಾಜ್ ನಾಕಲಗೂಡು, ಸಿ.ವಿ.ಲಿಂಗರಾಜು ಇತರರು ಇದ್ದರು. 
ಜಿಲ್ಲೆ

ಕಣತೂರು ಗ್ರಾಪಂ ಅಧ್ಯಕ್ಷರಾಗಿ ನಿಂಗರಾಜು ಆಯ್ಕೆ

ಆಲೂರು: ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಿಂಗರಾಜು ಹಾಗೂ ಉಪಾಧ್ಯಕ್ಷರಾಗಿ ರಾಧಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಗ್ರಾಮ ಪಂಚಾಯಿತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಿಂಗರಾಜು ಹಾಗೂ ರಾಧಾ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ನೂತನ ಅಧ್ಯಕ್ಷ ನಿಂಗರಾಜು ಮಾತನಾಡಿದರು. ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಸ್.ಮಂಜೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ನಟರಾಜ್ ನಾಕಲಗೂಡು, ಸಿ.ವಿ.ಲಿಂಗರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್.ಜೆ.ಪೃಥ್ವಿ ರಾಮ್, ಮೇಘರಾಜ್, ಕವಿತಾ, ವಜ್ರೇಶ್, ಪದ್ಮಾ, ಶಾರದಾ, ಕೃಷ್ಣೇಗೌಡ, ನಿರ್ವಣಯ್ಯ, ನಾಗರತ್ನಾ, ದೇವರಾಜ್, ಪುಷ್ಪಾ, ರತ್ನಮ್ಮ, ಪಿಡಿಒ ಪುರುಷೋತ್ತಮ ಇದ್ದರು.