ಜಿಲ್ಲೆ

ಕಣ್ಣಿನ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ

ಚಾಮರಾಜನಗರ: ಪ್ರತಿಯೊಬ್ಬರು ಪಂಚೇಂದ್ರಿಯಗಳಲ್ಲಿ ಒಂದಾಗಿರುವ ಕಣ್ಣಿನ ಸುರಕ್ಷತೆ ಕುರಿತು ಹೆಚ್ಚಿ ಒತ್ತು ನೀಡಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ಸಲಹೆ ನೀಡಿದರು.

ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ,

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಹಾಗೂ ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಕಣ್ಣಿನ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಕಣ್ಣುಗಳು ಮಾನವನ ದೇಹಕ್ಕೆ ಅತಿಮುಖ್ಯವಾಗಿದ್ದು, ಅದನ್ನು ಸುರಕ್ಷತೆಯಿಂದ ಕಾಪಾಡಿಕೊಳ್ಳಬೇಕು. ರೋಟರಿ ಸಂಸ್ಥೆಯು ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸುತ್ತಿದ್ದು, ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ 195 ಜನರು ತಪಾಸಣೆ ಮಾಡಿಸಿಕೊಂಡರು. ಇದರಲ್ಲಿ 110 ಜನರು ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಂಬತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥಾಪಕ ಸದಸ್ಯ ಶ್ರೀನಿವಾಸಶೆಟ್ಟಿ, ಜಿ.ಆರ್.ಅಶ್ವಥ್ ನಾರಾಯಣ್, ಮಾಜಿ ಅಧ್ಯಕ್ಷ ನಾಗರಾಜು, ಕೆ.ಎಂ.ಮಹದೇವಸ್ವಾಮಿ,ಎ.ಶ್ರೀನಿವಾಸನ್, ಮುಂದಿನ ಸಾಲಿನ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಶ್ರೀನಿವಾಸ, ಅಂಕಶೆಟ್ಟಿ, ಮಾಯಾ ವೆಂಕಟೇಶ್, ಗುರುಸ್ವಾಮಿ, ನೇಮಿರಾಜ್, ಯೋಗಪ್ರಕಾಶ್, ಕಮಲ್ ರಾಜ್, ಸುರೇಶ್, ಪ್ರಭಾಕರ್, ಪಿಆರ್‌ಓ ವಿಜಯಕಾಂತ್ ಇತರರು ಹಾಜರಿದ್ದರು.