ಜಿಲ್ಲೆ

ಕಣ್ಣೆಗಾಲ ಗ್ರಾಮದಲ್ಲಿ ದರ್ತಿ ಅಬಾ ಜನ ಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಚಾಲನೆ

ಚಾಮರಾಜನಗರ: ದರ್ತಿ ಅಬಾ ಜನ ಜಾತಿಯ ಉನ್ನತ ಗ್ರಾಮ ಅಭಿಯಾನದ ಯೋಜನೆಯಡಿ ತಾಲೂಕಿನ ಪರಿಶಿಷ್ಟ ವರ್ಗದ ಜನರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ದೊರೆಯುವ ಮೂಲಭೂತ ಸೌಕರ್ಯ ಪಡೆದುಕೊಳ್ಳಬೇಕೆಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುಬ್ಬರಾಯ ಸಲಹೆ ನೀಡಿದರು.

ಚಾಮರಾಜನಗರ ತಾಲೂಕಿನ ಕಣ್ಣೆಗಾಲ ಗ್ರಾಮದಲ್ಲಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ಸಭೆಯಲ್ಲಿ ಮಾತನಾಡಿದ ಅವರು ಅಭಿಯಾನದಲ್ಲಿ ತಾಲೂಕಿನ ಯಾನಗಳ್ಳಿ, ಕಣ್ಣೇಗಾಲ, ಮೇಲ್ಮಾಳ, ಹಾಗೂ ಬೇಡುಗುಳಿ ಗ್ರಾಮಗಳು ಆಯ್ಕೆಯಾಗಿದ್ದು 17 ಇಲಾಖೆಗಳ ಸಹಯೋಗದೊಂದಿಗೆ ಸರ್ವೆ ಕಾರ್ಯವನ್ನು ನಡೆಸಿ ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ಧಿಗಾಗಿ ಕ್ರಿಯ ಯೋಜನೆಯನ್ನು ತಯಾರಿಸಲಾಗುತ್ತಿದೆ, ಅದರಂತೆ ಈ ಗ್ರಾಮ ಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕೆಂಪನಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್ ಮಾದೇಶ್, ಅವರು ಮಾತನಾಡಿ ಮಾಹಿತಿ, ಶಿಕ್ಷಣ ಹಾಗೂ ಸಂಪರ್ಕದ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಿಲ್ಪ ಎಸ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕ್ಷಕ ಸುರೇಶ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಮೇಗೌಡ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.