ಮದ್ದೂರು: ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ತಾಲೂಕಿನಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದು ಟ್ರಸ್ಟ್‌ನ ಟ್ರಸ್ಟಿ ಕೆ.ಎಂ.ರವಿ ತಿಳಿಸಿದರು.
ತಾಲೂಕಿನ ಯಡಾನಹಳ್ಳಿ ಗ್ರಾಮದಲ್ಲಿ ಟ್ರಸ್ಟ್ ವತಿಯಿಂದ ತಾಲೂಕಿನ ಪ್ರತಿ ಮನೆ ಮನೆಗೆ ನೂತನ ವರ್ಷದ ಕ್ಯಾಲೆಂಡರ್, ಸಂಕ್ರಾಂತಿ ಕಿಟ್ ಹಾಗೂ ಸೀರೆಯನ್ನು ವಿತರಿಸಿ ಅವರು ಮಾತನಾಡಿದರು.
ಟ್ರಸ್ಟ್‌ನ ಅಧ್ಯಕ್ಷ ಕೆ.ಎಂ.ಉದಯ್ ನೇತೃತ್ವದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ತಾಲೂಕಿನ 1 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಬಾಗಿನ ಮತ್ತು ಸಂಕ್ರಾಂತಿ ಕಿಟ್ ವಿತರಣೆ ಮಾಡುವ ಮೂಲಕ ದಾಖಲೆ ನಿರ್ಮಿಸಲಾಗಿದೆ ಎಂದರು.
ಈಗಾಗಲೇ ತಾಲೂಕಿನಲ್ಲಿ ಪ್ರತಿ ಮನೆಗೆ ಉಚಿತವಾಗಿ ಕುಡಿಯುವ ನೀರಿನ ಕ್ಯಾನ್, ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಕಿಟ್ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಆಹಾರ ಕಿಟ್ ವಿತರಣೆ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಾಲೂಕಿನ ಜನರಿಗೆ ಉಪಯೋಗ ಕಲ್ಪಿಸಿದ್ದಾರೆ ಎಂದು ತಿಳಿಸಿದರು.
ಮುಖಂಡರಾದ ಶಿವು, ಮನು, ರಾಜಣ್ಣ, ಗೋವಿಂದು, ಶೇಖರ್, ವೆಂಕಟಾಚಲ, ರಾಜೇಶ್, ಮನೋಹರ್, ವಿನಯ್, ರೋಹನ್ ಇದ್ದರು.