ಜಿಲ್ಲೆ

ಕನಮಡಿಯಲ್ಲಿ ಲಸಿಕಾ ಅಭಿಯಾನ

ವಿಜಯಪುರ: ವಿಜಯಪುರ ಜಿಲ್ಲೆಯ ಕನಮಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಂದು ವಿಶೇಷ ಕೋವಿಡ್ ಲಸಿಕಾ ಆಂದೋಲನ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಜೀಮ್ ಪ್ರೇಮಜಿ ಫೌಂಡೇಷನ್ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 100% ಲಸಿಕೆ ಹಾಕಬೇಕು ಎಂಬ ಕಾರಣದಿಂದ ಗ್ರಾಮೀಣ ಭಾಗದಲ್ಲೂ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಡಾ. ಆನಂದ ಪಾಟೀಲ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಸಂತೋಷ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಭಾಗಿಯಾಗಿದ್ರು.