ಚಿತ್ರದುರ್ಗ: ಬದುಕಿನ ಅಸ್ಮಿತೆ, ಭವಿಷ್ಯದ ಭಾಷೆ ಕನ್ನಡವನ್ನು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸಬಾರದು ಎಂದು ನಿವೃತ್ತ ಪ್ರಾಚಾರ‌್ಯ ಜೆ.ಯಾದವರೆಡ್ಡಿ ಹೇಳಿದರು.
ನಗರದ ಹಳೇ ಮಾಧ್ಯಮಿಕ ಶಾಲಾ ಆವರಣ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ‌್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿರುವ ಏಳು ಕೋಟಿ ಜನರು ಕನ್ನಡ ಮಾತನಾಡುವ ಮೂಲಕ ಭಾಷೆ ಉಳಿಸಿ ಬೆಳೆಸುವ ಕೆಲಸ ಮಾಡಬೇಕಿದೆ. ಕನ್ನಡಕ್ಕೆ ಮೊದಲ ಆದ್ಯತೆ, ನಂತರ ಹಿಂದಿ, ಇಂಗ್ಲಿಷ್ ಕಲಿತರೆ ತಪ್ಪಿಲ್ಲವೆಂದರು.
ರಾಜ್ಯ ಟಿಪ್ಪುಸುಲ್ತಾನ್‌ಅಭಿಮಾನಿಗಳ ಮಹಾವೇದಿಕೆ ಅಧ್ಯಕ್ಷ ಟಿಪ್ಪುಖಾಸಿಂ ಆಲಿ ಮಾತನಾಡಿ, ಪ್ರತಿಯೊಬ್ಬರು ಕನ್ನಡ ನಾಡು, ನುಡಿಯ ಬಗ್ಗೆ ಅಭಿಮಾನ ಇಟ್ಟುಕೊಳ್ಳಬೇಕೆಂದರು. ಎಸ್‌ಡಿಎಂಸಿ ಅಧ್ಯಕ್ಷ ಸೈಯದ್ ಇಸ್ಮಾಯಿಲ್, ಉಪಾಧ್ಯಕ್ಷ ಆದಿಲ್, ಮುಖ್ಯಶಿಕ್ಷಕಿ ತಸ್ಮಿಯಾ ಮತ್ತಿತರರು ಇದ್ದರು.