ಜಿಲ್ಲೆ

ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಕನ್ನಡ ರಾಜ್ಯೋತ್ಸವ-2024ರ ಅಂಗವಾಗಿ ಜಿಲ್ಲಾ ವ್ಯಾಪ್ತಿಗೆ ಒಳಪಡುವ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ನೀಡಲಾಗುವ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲಾಡಳಿತ ಅರ್ಜಿ ಆಹ್ವಾನಿಸಿದೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಚಾಮರಾಜನಗರ ಜಿಲ್ಲೆಯ ಸಾಧಕರನ್ನು ಗುರುತಿಸಿ ನ.1ರಂದು ನಡೆಯುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಜಾನಪದ ಕಲೆ, ಸಾಹಿತ್ಯ, ಜಾನಪದ ವೈದ್ಯ, ಕನ್ನಡ ಸಾಹಿತ್ಯ ಸೇವೆ, ಕನ್ನಡಪರ ಹೋರಾಟ, ವೈದ್ಯಕೀಯ ಸೇವೆ, ಸೈನಿಕ ಸೇವೆ, ಸಿನಿಮಾ, ಸಂಗೀತ, ನಾಟಕ, ಗಾಯನ, ಗಮಕ, ಕನ್ನಡ ಭಾಷೆ ಮತ್ತು ಲಿಪಿ ಬಳಕೆ, ಗಡಿನಾಡ ಸೇವೆ, ಮಕ್ಕಳ ಸಾಹಸ ಮತ್ತು ರಕ್ಷಣೆ, ಸಮಾಜಸೇವೆ, ಪತ್ರಿಕೋದ್ಯಮ, ಮಹಿಳಾ ಸಬಲೀಕರಣ, ಇತರ ಅರ್ಹ ಸೇವೆ ಸಲ್ಲಿಸಿರುವ ಸಾಧಕರಿಗೆ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ.

ಆಸಕ್ತರು ತಮ್ಮ ಹೆಸರು, ವಿಳಾಸ (ಆಧಾರ್ ಕಾರ್ಡ್ ಲಗತ್ತಿಸಬೇಕು), ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ಪಡೆದಿರುವ ಪ್ರಶಸ್ತಿಗಳ ವಿವರ, ತೊಡಗಿಸಿಕೊಂಡಿರುವ ಸೇವಾ ವಿವರಗಳನ್ನೊಳಗೊಂಡ ಅರ್ಜಿಯನ್ನು ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ, ಕೊಠಡಿ ಸಂಖ್ಯೆ : 218, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಚಾಮರಾಜನಗರ ಇವರಿಗೆ ಖುದ್ದಾಗಿ ಅಥವಾ ಇ-ಮೇಲ್ ವಿಳಾಸ ಛ್ಞ್ಚ.ಟ್ಠಛಿಃಜಞಜ್ಝಿ.್ಚಟಞಗೆ ಅ.27ರೊಳಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.