ಎನ್.ಆರ್.ಪುರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಶ್ರಾವಣ ಸಾಹಿತ್ಯ ಸಂಭ್ರಮ, ರಸ ಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಎಚ್.ಎಸ್.ಪೂರ್ಣೇಶ್, ಭಾಗ್ಯಾ, ರುದ್ರಪ್ಪ, ನಂದಿನಿ, ಭಾನುಮತಿ ಇತರರಿದ್ದರು.  
ಜಿಲ್ಲೆ

ಕನ್ನಡ ಸಾಹಿತ್ಯ ಪರಿಷತ್‌ನಿಂದ ಭಾಷೆ ಬೆಳವಣಿಗೆ

ಎನ್.ಆರ್.ಪುರ: ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಸ್ವಾಯತ್ತ ಸಂಸ್ಥೆ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಉಪ ಪ್ರಾಚಾರ್ಯ ರುದ್ರಪ್ಪ ತಿಳಿಸಿದರು.

ಬುಧವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶ್ರಾವಣ ಸಾಹಿತ್ಯ ಸಂಭ್ರಮ, ರಸ ಪ್ರಶ್ನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಕಸಾಪ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸುತ್ತಿದೆ. ಮಕ್ಕಳ ಜ್ಞಾನ ಹೆಚ್ಚಿಸಲು ರಸ ಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ತಾಲೂಕು ಕಸಾಪ ಅಧ್ಯಕ್ಷ ಎಚ್.ಎಸ್.ಪೂರ್ಣೇಶ್ ಮಾತನಾಡಿ, ಮಕ್ಕಳ ಸಾಮಾನ್ಯ ಜ್ಞಾನ ವೃದ್ಧಿಯಾಗಲ ರಸ ಪ್ರಶ್ನೆ ಕಾರ್ಯಕ್ರಮ ನಡೆಸಿ ವಿಜೇತ ತಂಡಗಳಿಗೆ ಬಹುಮಾನ ನೀಡುತ್ತಿದ್ದೇವೆ. ಪ್ರತಿ ಶಾಲೆಯಲ್ಲೂ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನ ಮಾಡುತ್ತಿದ್ದೇವೆ ಎಂದರು.

ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ಸಿ.ಎ.ಯುಕ್ತಾ ಹಾಗೂ ಪ್ರಥಮ್ ಅವರನ್ನು ಪುರಸ್ಕರಿಸಲಾಯಿತು.

ಪಪಂ ಅಧ್ಯಕ್ಷೆ ಜುಬೇದಾ, ಕಸಾಪ ಪೂರ್ವಾಧ್ಯಕ್ಷ ಪಿ.ಕೆ.ಬಸವರಾಜಪ್ಪ, ಭಾಗ್ಯಾ ನಂಜುಂಡಸ್ವಾಮಿ, ಭಾನುಮತಿ, ಕೆ.ಎಸ್.ವಾಗ್ದೇವಿ, ರಾಮಪ್ಪ , ಟಿ.ಜಿ.ಸಂದೀಪ್‌ಕುಮಾರ್ ಇದ್ದರು.