ಬಾಗಲಕೋಟೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜರುಗಿದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದರು. ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವೈ.ಮೇಟಿ, ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ, ಡಿಸಿ ಜಾನಕಿ ಕೆ.ಎಂ, ಎಸ್ಪಿ ಅಮರನಾಥ ರೆಡ್ಡಿ ಇತರರು ಇದ್ದರು 
ಜಿಲ್ಲೆ

ಕನ್ನಡಕ್ಕೆ ರನ್ನನ ಕೊಡುಗೆ ಅಪಾರ

ಬಾಗಲಕೋಟೆ: ಕವಿ ಚಕ್ರವರ್ತಿ ಎಂದೇ ಖ್ಯಾತರಾಗಿರುವ ರನ್ನನು ಕನ್ನಡದ ಉತ್ಕೃಷ್ಟ ಕವಿಯಾಗಿದ್ದು, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜರುಗಿದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರನ್ನನ ಕಾಲದಲ್ಲಿ ಕನ್ನಡ ಕಾವ್ಯ ಕ್ಷೇತ್ರ ಸುವರ್ಣಯುಗವಾಗಿತ್ತು. ರನ್ನನಿರುವ ಕನ್ನಡಕ್ಕೆ ಅನ್ಯರಿಂದ ಬಹುದೇ ಧಕ್ಕೆ? ಬರಿಯ ಕವಿಯೇ ಸಿಡಿಲ ಚಕ್ಕೆ ಎಂಬ ಕುವೆಂಪು ಅವರ ಸಾಲುಗಳು ಕನ್ನಡಕ್ಕೆ ರನ್ನನ ಕೊಡುಗೆಗಳನ್ನು ಎತ್ತಿ ತೋರುತ್ತಿವೆ. ಕರ್ನಾಟಕಕ್ಕೆ ಭವ್ಯ ಇತಿಹಾಸವಿದ್ದು, ಮೌರ್ಯರು, ಕದಂಬರು, ಗಂಗರು, ಹೊಯ್ಸಳರು, ವಿಜಯನಗರದ ಅರಸು, ಚಾಲುಕ್ಯರು, ರಾಷ್ಟ್ರಕೂಟರು, ಮೈಸೂರಿನ ಒಡೆಯರು ಸೇರಿ ಇನ್ನು ಅನೇಕ ರಾಜ ಮನೆತನಗಳು ಈ ನಾಡಿಗೆ ನೀಡಿದ ಕೊಡುಗೆ ಅನನ್ಯವಾಗಿದೆ ಎಂದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರಧನವಾಗಿ ಮೊದಲ ಹಂತದಲ್ಲಿ ೧೫೨೩೮ ರೈತರಿಗೆ ೧೭.೩೮ ಕೋಟಿ ರೂ.ಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಹಿಳೆಯರು ಕೈಗೊಂಡ ಉಚಿತ ಪ್ರಯಾಣದ ಸಂಖ್ಯೆ ೮.೯೦ ಕೋಟಿ ಇದ್ದು, ಇದಕ್ಕಾಗಿ ಸರಕಾರ ೨೬೭.೩೦ ಕೋಟಿ ರೂ. ಭರಿಸಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ೫ ಕೆ.ಜಿ. ಅಕ್ಕಿಯ ಬದಲಾಗಿ ಪ್ರತಿ ಫಲಾನುಭವಿಗಳಿಗೆ ೧೭೪ ರೂ. ಗಳಂತೆ ಪಡಿತರ ಚೀಟಿ ಮುಖ್ಯಸ್ಥರ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು ೪,೨೬,೭೨೩ ಗೃಹ ಬಳಕೆಯ ಸಂಪರ್ಕಗಳಿದ್ದು, ಗೃಹಜ್ಯೋತಿ ಯೋಜನೆಯಡಿ ೪೧,೬೫೫೬ ಜನ ನೋಂದಾಯಿಸಿದ್ದಾರೆ. ೨೦೦ ಯುನಿಟ್‌ಗಿಂತ ಕಡಿಮೆ ಬಳಕೆ ಮಾಡುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಗೃಹಬಳಕೆ ಸ್ಥಾವರಗಳ ಸಂಖ್ಯೆ ೪,೨೫,೫೯೦ ಇರುತ್ತವೆ. ಸೆಪ್ಟೆಂಬರ ತಿಂಗಳಲ್ಲಿ ಒಟ್ಟು ೧೬.೨೩ ಕೋಟಿ ರೂ.ಗಳ ಅನುದಾನ ಅಂದಾಜಿಸಲಾಗಿದೆ. ಗೃಹಲಕ್ಷಿ÷್ಮÃ ಯೋಜನೆಯಡಿ ಜಿಲ್ಲೆಯಲ್ಲಿ ೪.೧೩ ಲಕ್ಷ ಫಲಾನುಭವಿಗಳು ಅಂದರೆ ಶೇ.೯೨.೦೨ ರಷ್ಟು ಜನ ಲಾಭ ಪಡೆಯುತ್ತಿದ್ದಾರೆ. ಯುವನಿ ಯೋಜನೆಯಡಿ ಅರ್ಜಿ ಸಲ್ಲಿಸಿದ ೮೨೪೬ರ ಅಭ್ಯರ್ಥಿಗಳ ಪೈಕಿ ೬೮೨೧ ಜನ ಲಾಭ ಪಡೆಯುತ್ತಿದ್ದಾರೆ ಎಂದರು.

ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಾನಾ ಪಿಂಚಣಿ ಯೋಜನೆಗಳಡಿ ಜಿಲ್ಲೆಯ ೨,೫೨,೧೩೨ ಜನ ಫಲಾನುಭವಿಗಳು ನೇರ ನಗದು ವರ್ಗಾವಣೆಯ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಜಿಲ್ಲೆಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿ ಜಯಶ್ರೀ ತಳವಾರ ಪತ್ರಿಕೋದ್ಯಮ ವಿಭಾಗದಲ್ಲಿ ೯ ಚಿನ್ನದ ಪದಕ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಾಗಲಕೋಟೆ ಶಾಸಕ, ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲಂಕೆಣ್ಣವರ, ಜಿಲ್ಲಾಽಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಜಿ.ಪಂ ಸಿಇಒ ಶಶಿಧರ ಕುರೇರ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಽಕಾರಿ ಸಂತೊಷ ಜಗಲಾಸರ ಸೇರಿದಂತೆ ಇತರರು ಉಪಸ್ಥಿತರಿದ್ದರು.