ಜಿಲ್ಲೆ

ಕನ್ನಡ,ಜ್ಞಾನ-ಅನ್ನದ ಭಾಷೆಯಾಗಲಿ,ಶ್ರೀ ಬಸವಪ್ರಭು ಸ್ವಾಮೀಜಿ

ಚಿತ್ರದುರ್ಗ:ಬದಲಾಗುತ್ತಿರುವ ಜಾಗತಿಕ ಮತ್ತು ಮಾರುಕಟ್ಟೆಯ ನೀತಿಗಳಿಂದಾಗಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಉಳಿಸಿಕೊಳ್ಳ ಬೇ ಕಾದ ದೊಡ್ಡ ಸವಾಲು ನಮ್ಮ ಮುಂದಿದೆ ಎಂದು ಮುರುಘಾಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.
ನಗರದ ಎಸ್‌ಜೆಎಂ ಕಾಲೇಜಿನಲ್ಲಿ ಶುಕ್ರವಾರ ಕನ್ನಡ ವಿಭಾಗ ಹಾಗೂ ದಾವಣಗೆರೆ ವಿವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆಯಿಂ ದ ಆಯೋಜಿಸಿದ್ದ ತೃತೀಯ ಬಿಎ ಐಚ್ಛಿಕ ಪಠ್ಯಗಳ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಭಾಷೆ,ಸಾಹಿತ್ಯ,ಸಂಸ್ಕೃತಿ ಮತ್ತು ಪರಂಪರೆ ಅರಿವನ್ನು ಮೂಡಿಸುವ ಮೂಲಕ ನಮ್ಮ ಕನ್ನಡ ಭಾಷೆಯನ್ನು ಜ್ಞಾನ,ಅನ್ನದ ಭಾಷೆಯನ್ನಾಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ‌್ಯ ಪ್ರವೃತ್ತರಾಗಬೇಕಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಪೂರಕ ವಾಗುತ್ತವೆ ಎಂದರು.
ಎಸ್‌ಜೆಎಂ ವಿದ್ಯಾಪೀಠದ ಮಾನವ ಸಂಪನ್ಮೂಲ ನಿರ್ದೇಶಕಿ ವಿಜಯ ಕೆ.ಮಠ್ ಮಾತನಾಡಿ,ಕನ್ನಡದ ಮೂಲಕವೇ ನಾವು ಜಗತ್ತನ್ನು ಕಾಣಬೇಕು. ಆ ಮೂಲಕ ನಮ್ಮ ಭಾಷೆಯನ್ನು ಬೆಳೆಸಬೇಕಿದೆ ಎಂದರು. ವಿ.ವಿ.ಕನ್ನಡ ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಅವರು ಆಶಯ ನುಡಿಗಳನ್ನಾಡಿದರು.ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ ಅವರು ಕನ್ನಡ ಭಾಷೆ ಮತ್ತು ಭಾಷಾ ವಿಜ್ಞಾನ-ಇತ್ತೀಚಿನ ಬೆಳವಣಿಗೆಗಳ ಕುರಿತು ಮಾತನಾಡಿದರು.
ಪ್ರಾಚಾರ್ಯ ಡಾ.ಎಸ್.ಎಚ್.ಪಂಚಾಕ್ಷರಿ ಅವರು ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಡಾ.ಹರ್ಷವರ್ಧನ್,ಪ್ರಾಧ್ಯಾ ಪಕರಾದ ಪ್ರೊ.ಆರ್.ಕೆ.ಕೇದಾರನಾಥ್,ಪ್ರೊ.ಎಲ್.ಶ್ರೀನಿವಾಸ್,ಪ್ರೊ.ಸಿ.ಎನ್.ವೆಂಕಟೇಶ್,ಡಾ.ಸತೀಶ್‌ನಾಯ್ಕೊ,ಪ್ರೊ.ನಾಗರಾಜ್, ಪ್ರೊ.ಮಂಜುನಾಥಸ್ವಾಮಿ,ಪ್ರೊ.ಸ್ವಾಮಿ,ಪ್ರೊ.ಎನ್.ಚಂದಮ್ಮ,ವಿ.ಇ.ಮಧು,ಮೋಹನ್‌ಮತ್ತಿತರರು ಇದ್ದರು. ಎಸ್.ಕಾವ್ಯ ಪ್ರಾರ್ಥಿಸಿ ದರು. ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷ ಪ್ರೊ.ಜಿ.ಎನ್.ಬಸವರಾಜಪ್ಪ ಸ್ವಾಗತಿಸಿದರು. ಖಜಾಂಚಿ ಪ್ರೊ.ಡಿ.ಅಂಜನಪ್ಪ ವಂದಿಸಿದರು. ಡಾ.ಬಿ.ರೇವಣ್ಣ ನಿರೂಪಿಸಿದರು.

-