ಗುಂಡ್ಲುಪೇಟೆ ತಾಲೂಕಿನ ರಂಗೂಪುರ ಗ್ರಾಮದಲ್ಲಿ ನಟರಾಜು ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ. 
ಜಿಲ್ಲೆ

ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಗುಂಡ್ಲುಪೇಟೆ: ತಾಲೂಕಿನ ರಂಗೂಪುರ ಗ್ರಾಮದಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಕಬ್ಬಿನ ಬೆಳೆ ನಾಶವಾಗಿದೆ. ಗ್ರಾಮದ ನಟರಾಜು ಅವರ ಕಬ್ಬಿನ ಗದ್ದೆಗೆ ಗುರುವಾರ ಮಧ್ಯರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸುವ ವೇಳೆಗೆ ಸುಮಾರು ಒಂದೂವರೆ ಎಕರೆ ಪ್ರದೇಶದಲ್ಲಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಈ ಬಗ್ಗೆ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.