ಚಿತ್ರದುರ್ಗ: ಗರ್ಭಿಣಿಯರು ಕಬ್ಬಿಣಾಂಶದ ಕೊರತೆ ನೀಗಿಸಿಕೊಂಡು ಸುರಕ್ಷಿತ ತಾಯ್ತನ ಪಡೆಯಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ ಹೇಳಿದರು.
ತಾಲೂಕಿನ ಹಾಯ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಲ್ಲಿ ಮಾತನಾಡಿ, ಗರ್ಭಿಣಿಯರ ಆರೈಕೆಯಲ್ಲಿ ಕಬ್ಬಿಣಾಂಶ ಕೊರತೆಯಿಂದ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿ ರಕ್ತ ಹೀನತೆ ಉಂಟಾಗುತ್ತದೆ ಎಂದು ಎಚ್ಚರಿಸಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ತಾಯಿ ಕಾರ್ಡ್‌ನ ಮಹತ್ವ ಕುರಿತು ಮಾಹಿತಿ ನೀಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹರ್ಷ ಮಾತನಾಡಿದರು.
ಫಾರ್ಮಸಿ ಅಧಿಕಾರಿ ಸತೀಶ್, ಪ್ರಯೋಗ ಶಾಲಾ ತಂತ್ರಜ್ಞಾಧಿಕಾರಿ ಉಷಾ, ನಸಿರ್ಂಗ್ ಅಧಿಕಾರಿ ಮಧು, ಸಮುದಾಯ ಆರೋಗ್ಯಾಧಿಕಾರಿ ಪಾಲಯ್ಯ, ಆರೋಗ್ಯ ಸುರಕ್ಷತಾಧಿಕಾರಿಗಳಾದ ರೇಖಾ, ಶ್ರೀಮತಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಅವಿನಾಶ್,ಪ್ರವೀಣ್ ಇತರರು ಇದ್ದರು.