ಚಾಮರಾಜನಗರ: ಜಮೀನಿನ ಮಧ್ಯೆದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಗದ್ದೆ ಬೆಂಕಿಗಾಹುತಿಯಾಯಿತು.
ತಾಲೂಕಿನ ಕೆಂಪನಪುರ ಗ್ರಾಮದ ನಿವಾಸಿ ಮಲ್ಲಿಕಾರ್ಜುನಪ್ಪ ಎಂಬುವವರಿಗೆ ಸೇರಿದ ಸುಮಾರು 1 ಎಕರೆ ಜಮೀನಿನ ನಡುವೆ ವಿದ್ಯುತ್ ತಂತಿ ಹಾದು ಹೋಗಿದೆ. ಶನಿವಾರ ಮಧ್ಯಾಹ್ನದ ವೇಳೆಯಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದು, ಒಂದಕ್ಕೊಂದು ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡು ಕಬ್ಬು ಸುಟ್ಟು ಹೋಗಿದೆ. ಸ್ಥಳೀಯರು ಮತ್ತು ಅನೇಕ ಕೂಲಿ ಆಳುಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ ಸಾಧ್ಯವಾಗಿಲ್ಲ. ಬಳಿಕ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಇನ್ನು ಉಂಟಾಗಬಹುದಾದ ದೊಡ್ಡ ಅಪಾಯವನ್ನು ತಪ್ಪಿಸಿದರು.
===========