ಜಿಲ್ಲೆ

ಕಬ್ಬಿನಾಲೆಯಲ್ಲಿ ಡಿಸಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟನೆ

ಹೆಬ್ರಿ: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಬ್ಬಿನಾಲೆಯ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಕೆಳಮಠದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ವಿಭಾಗ ದ ಸಹಾಯಕ ಆಯುಕ್ತ ರಾಜು, ಹೆಬ್ರಿ ತಹಸೀಲ್ದಾರ್ ಕೆ. ಪುರಂದರ್,‌ಡಿವೈಎಸ್ಪಿ ಜಯಶಂಕರ್, ಹೆಬ್ರಿ ತಾಲೂಕು ಪಂಚಾಯಿತಿ ಅಧ್ಯಕ್ಷ ರಮೇಶ್ ಪೂಜಾರಿ, ಮುದ್ರಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಹೆಗ್ಡೆ, ಉಪಸ್ಥಿತರಿದ್ದರು.
ಶ್ರೀ ಗೋಪಾಲ ಕೃಷ್ಣ ದೇವಸ್ಥಾನ ಕೆಳಮಠದಲ್ಲಿ ಜಿಲ್ಲಾಧಿಕಾರಿಯನ್ನು ಗೌರವಿಸಲಾಯಿತು.