ಜಿಲ್ಲೆ

ಕರಡಿ ದಾಳಿಯಿಂದ ಗಾಯ

ಕಿರಣ್ ಮಾದರಹಳ್ಳಿ

ಹನೂರು: ತಾಲೂಕಿನ ಚನ್ನೂರು ಗ್ರಾಮದ ಹೊರ ವಲಯದಲ್ಲಿ ಬುಧವಾರ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿದೆ.

ಗ್ರಾಮದ ಪುಟ್ಟಭೋವಿ (50) ಗಾಯಗೊಂಡವರು. ಈತ ಬುಧವಾರ ಬೆಳಗ್ಗೆ 5.30ರಲ್ಲಿ ಗ್ರಾಮದ ಹೊರ ವಲಯದಲ್ಲಿ ಬಹಿರ್ದೆಸೆಗೆ ತೆರಳಿದ್ದರು. ಸಮೀಪದ ಅರಣ್ಯ ಪ್ರದೇಶದಿಂದ ಬಂದ ಕರಡಿ ಅವರ ಮೇಲೆ ಎರಗಿದ್ದರಿಂದ ಕಾಲಿಗೆ ಗಾಯವಾಗಿದೆ. ಈತ ಚೀರಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದಾಗ ಕರಡಿ ಓಟ ಕಿತ್ತಿದೆ. ಕುಟುಂಬಸ್ಥರು ಗಾಯಾಳುವನ್ನು ಕಾಮಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿ ಕೊಡಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.