ಜಿಲ್ಲೆ

ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

ಹಾಸನ: ಬೆಂಗಳೂರಿನ ಕ್ರೈಸ್ಟ್ ಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯದ ಐ.ಸಿ.ಎಸ್.ಇ ಶಾಲೆಗಳ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಎಸ್.ಆರ್.ಎಸ್ ಪ್ರಜ್ಞಾ ವಿದ್ಯಾ ಶಾಲೆಯ ನಾಲ್ಕು ವಿದ್ಯಾರ್ಥಿಗಳು ತಮ್ಮ ಅತ್ಯಮೋಘ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
7ನೇ ತರಗತಿಯ ಎಚ್.ಎಸ್.ದೀಪ್ತಿಶ್ರೀ, ಎಚ್.ಡಿ.ಇಂಪನ, 8ನೇ ತರಗತಿಯ ಆರ್.ಎಸ್. ರಿಷಿಕೇಶ್, 9ನೇ ತರಗತಿ ಕೆ.ಆರ್. ಚಿರಾಗ್ ಕೆ.ಆರ್. ಇವರು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆಯುವ ಮೂಲಕ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗುವುದರ ಜೊತೆಗೆ ರಾಜ್ಯಮಟ್ಟದ ಚಾಂಪಿಯನ್ ಟ್ರೋಫಿಯನ್ನು ಪಡೆದುಕೊಂಡು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಇವರನ್ನು ಶಾಲೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಶುಭ ಕೋರಿರುತ್ತಾರೆ.