ತುಮಕೂರು : ಜಿಲ್ಲೆಯಲ್ಲಿ ಹೋಂ ಐಸೋಲೇಷನ್, ಹೋಂ ಕ್ವಾರಂಟೈನಲ್ಲಿರುವ ಸೋಂಕಿತರನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸ್ಥಳಾಂತರಿಸಬೇಕು ಹಾಗೂ ಸೋಂಕಿನ ಮೂಲ ಪತ್ತೆ ಹಚ್ಚಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ವಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕರೊನಾ ಸೋಂಕು ತಡೆಗಟ್ಟುವಿಕೆ, ನಿರ್ವಹಣೆ ಕುರಿತಂತೆ ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ ಕೆಸ್ವಾನ್ ಮೂಲಕ ಕಂದಾಯ, ಆರೋಗ್ಯ, ನಗರ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಜತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಶನಿವಾರ ತುರ್ತು ಸಭೆ ನಡೆಸಿದರು.
ಹೋಂ ಐಸೋಲೇಷನ್ ಹಾಗೂ ಹೋಂ ಕ್ವಾರಂಟೈನ್‌ನಲ್ಲಿರುವವರು ಎಲ್ಲೆಂದರಲ್ಲೆ ಓಡಾಡುತ್ತಿರುವ ಬಗ್ಗೆ ದೂರುಗಳಿವೆ. ಜತೆಗೆ ಅವರು ಪ್ರತ್ಯೇಕವಾಗಿರಲು ಸೌಲಭ್ಯಗಳು ಇಲ್ಲದಿರಬಹುದು. ಆದ್ದರಿಂದ ಹೋಂ ಐಸೋಲೇಷನ್ ಹಾಗೂ ಹೋ ಕ್ವಾರಂಟೈನ್‌ನಲ್ಲಿರುವವರನ್ನು ಪರೀಕ್ಷೆ ವಾಡಿ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಬೇಕು ಎಂದರು.
ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ ಸೋಂಕಿನ ಲಕ್ಷಣ ಇಲ್ಲದವರು ಮತ್ತು ಆಮ್ಲಜನಕ ಅವಶ್ಯಕವಿಲ್ಲದವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಬೇಕು. ಕ್ವಾರಂಟೈನ್‌ನಲ್ಲಿದ್ದ ಸೋಂಕಿತರ ಮನೆಯವರನ್ನು ಕಡ್ಡಾಯವಾಗಿ ರ‌್ಯಾಪಿಡ್ ಟೆಸ್ಟ್‌ಗೆ ಒಳಪಡಿಸಬೇಕು ಎಂದು ನಿರ್ದೇಶಿಸಿದರು.
ಸೋಂಕಿತರಿಗೆ ಸೋಂಕು ಎಲ್ಲಿಂದ ಬಂದಿದೆ ಎಂಬ ಮೂಲವನ್ನು ಪತ್ತೆ ಹಚ್ಚಬೇಕು. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಗುರುತಿಸಿ ಅವರನ್ನು ಟೆಸ್ಟ್‌ಗೊಳಪಡಿಸುವ ಪ್ರವಾಣ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರ್, ಆರೋಗ್ಯಾಧಿಕಾರಿ,ವೈದ್ಯರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿ ಹಾಗೂ ಪಂಚಾಯತ್ ರಾಜ್ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಮನೆ ಮನೆ ಸಮೀಕ್ಷೆ ನಡೆಸಿ, ಸೋಂಕಿನ ಲಕ್ಷಣ ಹೊಂದಿರುವವರ ಬಗ್ಗೆ ವಾಹಿತಿ ಸಂಗ್ರಹಿಸಬೇಕು. ಒಂದು ವೇಳೆ ಸೋಂಕಿನ ಲಕ್ಷಣಗಳಿದ್ದರೆ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಒಂದು ವೇಳೆ ಆಶಾಕಾರ್ಯಕರ್ತೆಯರು ಕೆಲಸ ನಿರ್ವಹಿಸಲು ನಿರಾಕರಿಸಿದರೆ ಅಂತಹವರಿಗೆ ನೋಟಿಸ್ ನೀಡಿ ನಿಯವಾನುಸಾರ ಕ್ರಮ ಕೈಗೊಳ್ಳುವಂತೆ ಡಿಎಚ್‌ಒ ಡಾ,ನಾಗೇಂದ್ರಪ್ಪಗೆ ಅವರಿಗೆ ಸೂಚಿಸಿದರು.
ಚಿಕಿತ್ಸೆ ಅಗತ್ಯವಿರುವ ಎಲ್ಲರಿಗೂ ಚಿಕಿತ್ಸೆ ಲಭ್ಯವಾಗಬೇಕು, ಹಾಸಿಗೆ ಲಭ್ಯತೆ ಇರುವ ಕಡೆ ಸೋಂಕಿತರನ್ನು ದಾಖಲು ವಾಡಬೇಕು. ಹಾಸಿಗೆ ಖಾಲಿಯಿರುವ ಕಡೆ ತಾವು ಶಿಪಾರಸು ವಾಡುವ ಸೋಂಕಿತರನ್ನು ಖಾಸಗಿ ಆಸ್ಪತ್ರೆಗಳು ನಿರಾಕರಿಸುವಂತಿಲ್ಲ. ಒಂದು ವೇಳೆ ನಿರಾಕರಿಸಿದರೆ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು.
ತಿಪಟೂರು ಸರ್ಕಾರಿ ಆಸ್ಪತ್ರೆ ಲ್ಯಾಬ್‌ನಲ್ಲಿ ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ತುರುವೇಕೆರೆ ಸೇರಿ ಮೂರು ತಾಲೂಕುಗಳ ಕರೊನಾ ಪರೀಕ್ಷೆಗಳನ್ನು ಸೀನಿಯಾರಿಟಿ ಆಧಾರದ ಮೇಲೆ ನಡೆಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಶಿರಾ ಹಾಗೂ ತಿಪಟೂರು ಆಸ್ಪತ್ರೆಗಳಲ್ಲಿ ಕನಿಷ್ಠ 100 ಆಮ್ಲಜನಕ ಸಂಪರ್ಕವಿರುವ ಹಾಸಿಗೆಗಳನ್ನು ನಿರ್ವಾಣ ವಾಡಬೇಕು. ಇದರಿಂದ ಸೋಂಕಿತರನ್ನು ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಐಸಿಯು, ಆಮ್ಲಜನಕ ಸಂಪರ್ಕವಿರುವ ಹಾಸಿಗೆ, ವೆಂಟಿಲೇಟರ್ ಸೇರಿ ಸೋಂಕಿತರ ಚಿಕಿತ್ಸೆ ನೀಡುವ ಸೌಲಭ್ಯ ಒದಗಿಸಲಾಗಿದೆ. ಆಯಾ ತಾಲೂಕಿನಲ್ಲಿ ಚಿಕಿತ್ಸೆ ನೀಡಿ ಗಂಭೀರತೆ ಇದ್ದರೆ ವಾತ್ರ ಜಿಲ್ಲಾಸ್ಪತ್ರೆಗೆ ಶಿಾರಸು ಮಾಡಬೇಕು ಎಂದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ವಾತನಾಡಿ, ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಆಮ್ಲಜನಕ, ರೆಮಿಡಿಸಿಯರ್ ಅನ್ನು ಜಿಲ್ಲೆಯ ಅಗತ್ಯಕ್ಕೆ ಅನುಗುಣವಾಗಿ ತರಿಸಿಕೊಳ್ಳಲಾಗುತ್ತಿದೆ. ಪ್ರತಿನಿತ್ಯ ಕರೊನಾ ಕುರಿತಂತೆ ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ವಾರ್ ರೂಂ ಸ್ಥಾಪಿಸಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು. ಜಿಪಂ ಸಿಇಒ ಕೆ.ವಿದ್ಯಾಕುವಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ಡಿಎಚ್‌ಒ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸಚಿಕಿತ್ಸಕ ಡಾ.ಸುರೇಶ್‌ಬಾಬು ಇದ್ದರು.
ವೈದ್ಯರು ಸೇರಿ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು, ಸಮನ್ವಯತೆಯಿಂದ ಕರೊನಾ ನಿರ್ವಹಣೆ ವಾಡಬೇಕು. ಒಂದು ವೇಳೆ ಕರ್ತವ್ಯದಲ್ಲಿ ಲೋಪ ಎಸಗಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು, ಅಧಿಕಾರಿಗಳು ಮಾನವೀಯತೆಯಿಂದ ಕೆಲಸ ಮಾಡುವ ಮೂಲಕ ಸೋಂಕಿನ ವಿರುದ್ಧ ಗೆಲ್ಲಬೇಕು. ಜೆ.ಸಿ.ಮಾಧುಸ್ವಾಮಿ ಜಿಲ್ಲಾ ಉಸ್ತುವಾರಿ ಸಚಿವ