ಚಿತ್ರದುರ್ಗ: ನಗರದ ಮುರುಘಾರಾಜೇಂದ್ರ ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ಏಕೆ ವಾಹನ ನಿಲ್ಲಿಸಿಕೊಂಡಿದ್ದೀರಿ ಎಂದು ಪ್ರಶ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ನಾಲ್ವರ ಪೈಕಿ ಮೂವರನ್ನು ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭರತ್, ಅರುಣ್, ರಾಕೇಶ್, ಪೃಥ್ವಿ ಆರೋಪಿತರು. ಜಿಲ್ಲಾ ಪೊಲೀಸ್ ಘಟಕದ ಇಆರ್‌ಎಸ್‌ಎಸ್ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಭಾನುವಾರ ರಾತ್ರಿ ಗಸ್ತಿನಲ್ಲಿದ್ದ ವೇಳೆ ಮದ್ಯ ಸೇವಿಸಿ, ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ವಾಹನ ನಿಲ್ಲಿಸಿಕೊಂಡು ಕಿರಿಕಿರಿ ಮಾಡುತ್ತಿದುದ್ದನ್ನು ಕಂಡು ಪ್ರಶ್ನಿಸಿದ್ದಕ್ಕೆ ಇಬ್ಬರು ಪೊಲೀಸರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ತಳ್ಳಾಡಿ, ಸಮವಸ್ತ್ರ ಹರಿದು ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.