ಜಿಲ್ಲೆ

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನ ಪ್ರಪಂಚದಲ್ಲಿಯೋ ಶ್ರೇಷ್ಠ ಸಂವಿಧಾನವಾಗಿದ್ದು, ಅದನ್ನು ತಿಳಿದುಕೊಂಡು ಪಾಲನೆ ಮಾಡಬೇಕಿದೆ ಎಂದು ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಎಲ್.ಶ್ರೀನಿವಾಸ್ ತಿಳಿಸಿದರು.
ನಗರದ ನ್ಯಾಯಾಂಗ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಂವಿಧಾನ ಪೀಠಿಕೆ ಓದಿದ ನಂತರ ಅವರು ಮಾತನಾಡಿದರು.
ದೇಶದಲ್ಲಿ ಎಲ್ಲ ಧರ್ಮ, ಜಾತಿ, ಪಂಗಡದವರಿಗೂ ಸಂವಿಧಾನದಲ್ಲಿ ಸಮಾನವಾದ ಹಕ್ಕುಗಳು, ಸ್ವಾತಂತ್ರ್ಯವನ್ನು ನೀಡಲಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಪ್ರತಿಯೊಬ್ಬರಿಗೂ ನ್ಯಾಯ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಸಂವಿಧಾನದ ಪ್ರಸ್ತಾವನೆಯನ್ನು ಬುಡಕಟ್ಟು ಜನರಿಗೆ ಆಶ್ರಯ ಶಾಲೆಯ ಮಕ್ಕಳಿಗೂ ಓದಿ ಹೇಳಬೇಕು ಎಂದರು.
ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕಿ ಬಿ.ಎಸ್.ಪ್ರಭಾ ಅರಸ್, ವಿವಿಧ ಅಧಿಕಾರಿ, ಸಿಬ್ಬಂದಿ ಡಾ.ಮೋಹನ್, ಡಾ.ಮಧುಸೂದನ್, ಡಾ.ಶಂಕರ್, ಡಾ.ಮಂಜುನಾಥ್ ಇತರರು ಇದ್ದರು.