ಬಾಗಲಕೋಟೆಯ ಬಿಜೆಪಿ ಕಚೇರಿಯಲ್ಲಿ ಮುಖಂಡರು ಕಾಂಗ್ರೆಸ್ ಸರ್ಕಾರ ವಿರುದ್ಧದ ಪೋಸ್ಟರ್ ಬಿಡುಗಡೆಗೊಳಿಸಿದರು. ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಬಿಜೆಪಿ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಹಾಗೂ ಜಿಲ್ಲಾ ಮಾಧ್ಯಮ ಸಂಚಾಲಕ ಶಿವಾನಂದ ಸುರಪುರ ಸೇರಿದಂತೆ ಇತರರು ಇದ್ದರು.  
ಜಿಲ್ಲೆ

ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದು ಎರಡು ವರ್ಷಗಳಲ್ಲಿ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದೆ. ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಎನ್ನುವಂತಾಗಿದೆ. ಎಲ್ಲೆಂದರಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇದು ವಸೂಲಿ ಸರ್ಕಾರ ಎಂದು ರಾಜ್ಯ ಸಭಾ ಸದಸ್ಯ ನಾರಾಯಣಸಾ ಭಾಂಡಗೆ ಕಿಡಿಕಾರಿದರು.

ಇಲ್ಲಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೀಡಿರುವ ಆಡಳಿತ ಸಂಪೂರ್ಣ ವೈ-Àಲ್ಯವಾಗಿದೆ. ಸರ್ಕಾರದಿಂದ ಆಗುತ್ತಿರುವ ಮೋಸಕ್ಕೆ ಜನ ಸಾಮಾನ್ಯರು ಜರ್ಜರಿತರಾಗಿದ್ದಾರೆ. ಯಾವ ಸಾಧನೆ ಮಾಡಿದ್ದಾರೆ ಸಮಾವೇಶ ಮಾಡಲು ಸಿದ್ದರಾಗಿದ್ದಾರೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಎಂದರು.

ಭ್ರಷ್ಟಾಚಾರ, ವಿವಿಧ ಹಗರಣಗಳಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ನೀತಿಗಳು ಜನರಿಗೆ ನೋವು ಉಂಟು ಮಾಡಿವೆ. ಕಾಂಗ್ರೆಸ್ ರಾಜ್ಯದಲ್ಲಿ ಅಽಕಾರಕ್ಕೆ ಬಂದ ಮೇಲೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆ, ಹಿಂದು ಕಾರ್ಯಕರ್ತರ ಹತ್ಯೆ, ಒಟ್ಟಾರೆ ಕಾಂಗ್ರೆಸ್ ಕನ್ನಡಿಗರ ಬದುಕಿಗೆ ಶಾಪವಾಗಿದೆ ಎಂದು ಟೀಕಿಸಿದರು.

ಸಿಎಂ ಸಿದ್ದರಾಮಯ್ಯ ಕುಟುಂಬ ಬುಡಾ ಹಗರಣದಲ್ಲಿ ಸಿಲುಕಿದರೇ, ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವರೇ ಜೈಲಿಗೆ ಹೋದರು. ಎಸ್ಸಿ, ಎಸ್ಟಿಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಗ್ಯಾರಂಟಿಗಳಿಗೆ ಬಳಕೆ, ಹೀಗೆ ರಾಜ್ಯ ಸರ್ಕಾರ ಯಾವುದೇ ವರ್ಗದ ಜನರ ಅಭಿವೃದ್ಧಿ ಮಾಡದೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ತಿಳಿಸಿದರು.

ಸಚಿವ ಸಂತೋಷ ಲಾಡ್ ಅವರು ಯಾರ ಮಾತು ಕೇಳಿ ಯುದ್ಧ ನಿಲ್ಲಿಸಬೇಕು ಎಂದು ಹೇಳುತ್ತಿದ್ದಾರೆ. ಇವರನ್ನು ಕೇಳಿ ಯುದ್ಧ ಮಾಡುವುದು ಹಾಗೂ ನಿಲ್ಲಿಸಬೇಕಾ? ಈ ಬಗ್ಗೆ ಕೇಂದ್ರದ ನಾಯಕರು ನಿರ್ಧರಿಸುತ್ತಾರೆ. ಯುದ್ಧದ ಬಗ್ಗೆ ಸಂಬAಧಪಟ್ಟವರು ಮಾತನಾಡಿದರೆ ಸೂಕ್ತ ಎಂದರು.

ಬಿಜೆಪಿ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಹಾಗೂ ಜಿಲ್ಲಾ ಮಾಧ್ಯಮ ಸಂಚಾಲಕ ಶಿವಾನಂದ ಸುರಪುರ ಸೇರಿದಂತೆ ಇತರರು ಇದ್ದರು.