ಜಿಲ್ಲೆ

ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಹಾಗೂ ತರಬೇತಿ ಕಾರ್ಯಗಾರ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಅನುಭವ ಮಂಟಪದಲ್ಲಿAದು, ಅಂತರವಾಣಿ ಸಮುದಾಯ ರೇಡಿಯೋ ಕೇಂದ್ರ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಆಯೋಜಿಸಿದ “ಫ್ಯಾಕಲ್ಟಿ ಡೆವೆಲಪ್‌ಮೆಂಟ್ ಪ್ರೋಗ್ರಾಮ್” ಅಡಿಯಲ್ಲಿ “ಕನ್ನಡ ಸಾಹಿತ್ಯ ವಿಮರ್ಶಾ ಪರಂಪರೆ ಮತ್ತು ಅಂತರಶಿಸ್ತೀಯ ಅಧ್ಯಯನದ ನೆಲೆಗಳು” ಎನ್ನುವ ವಿಷಯ ಕುರಿತು ವಿಶೇಷ ಉಪನ್ಯಾಸ ಹಾಗೂ ತರಬೇತಿ ಕಾರ್ಯಗಾರ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾದ ಡಾ. ರಾಜಶೇಖರ ಹಳೆಮನೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಉಜಿರೆ, ಇವರು ಶ್ರೀ ಶರಣಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು.  ಈ ಕಾರ್ಯಗಾರದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಕಲ್ಯಾಣರಾವ ಪಾಟೀಲ, ಪತ್ರಿಕೋದ್ಯಮ ವಿಭಾಗದ ಡೀನ್ ಟಿ. ವಿ. ಶಿವಾನಂದನ್, ಆಂಗ್ಲ ವಿಭಾಗದ ಶ್ರೀಮತಿ ಕಾವೇರಿ ಕಾಮಶೆಟ್ಟಿ ಸೇರಿದಂತೆ ಮೂರು ವಿಭಾಗಗಳ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.