ಕಲಬುರಗಿ: ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ವಿಶೇಷ ವಿಮಾನದಲ್ಲಿ ಬಂದು, ಕಲಬುರಗಿ ವಿಮಾನ ನಿಲ್ದಾಣದಲ್ಲಿ ಗಣ್ಯರಿಂದ ಸ್ವಾಗತಿಸಲಾಯಿತು.
ಮೋದಿ ಅವರನ್ನು ಸ್ವಾಗತಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ.ಉಮೇಶ್ ಜಾಧವ್, ಶಾಸಕರಾದ ಬಸವರಾಜ ಮತ್ತಿಮಡು, ಡಾ.ಬಿ.ಜಿ.ಪಾಟೀಲ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ, ಮೇಯರ್ ವಿಶಾಲ ದರ್ಗಿ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೇರಿದಂತೆ ಪಕ್ಷದ ಮುಖಂಡರು, ಜಿಲ್ಲಾಮಟ್ಟದ ಅಧಿಕಾರಿಗಳು ಸ್ವಾಗತಿಸಿದರು.
ಕಲಬುರಗಿಯಿಂದ ಸೊಲ್ಲಾಪುರಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ.
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆಯಲಿರುವ ವಸತಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಮರಳಿ ಕಲಬುರಗಿಗೆ ಬಂದು, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.