ಜಿಲ್ಲೆ

ಕಲಾ ಕೌಸ್ತುಭ ಪ್ರಶಸ್ತಿ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ:ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಪಡೆದಿರುವ ನಗರದ ವಿದ್ಯಾವಿಕಾಸ ಪ್ರೌಢ ಶಾಲೆ ವಿದ್ಯಾ ರ್ಥಿಯಾಗಿದ್ದ ಕೆ.ಪಿ.ವರುಣ್,ದಾವಣಗೆರೆ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ಕನ್ನಡ ಕೌಸ್ತುಭ ಪ್ರಶಸ್ತಿಗೆ ಭಾಜನನಾಗಿದ್ದಾನೆ.

ಜು.30ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ತಿಳಿಸಿದ್ದಾರೆ. ವರುಣ್ ಡಯಟ್ ಉಪನ್ಯಾಸಕ ಕೆ.ಜಿ.ಪ್ರಶಾಂತ್-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಮಂಜುಳಾ ದಂಪತಿ ಪುತ್ರ.