ಜಿಲ್ಲೆ

ಕಲಾ ಪ್ರತಿಭೋತ್ಸವಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಉತ್ತೇಜನ ನೀಡಿ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವ ಸಲುವಾಗಿ ಕಲಾಪ್ರತಿಭೋತ್ಸವವನ್ನು ಏರ್ಪಡಿಸಲಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಸ್ಪರ್ಧೆಗಳಿಗೆ ಭಾಗವಹಿಸುವವರು ಅರ್ಜಿಯನ್ನು ನ.3ರ ಸಂಜೆ 5 ಗಂಟೆಯೊಳಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಹಾಯಕ ನಿರ್ದೇಶಕರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 08226-222210 ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕ ಬಿ.ಎಸ್.ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.