ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ದುಗ್ಗಹಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ವೇಷಭೂಷಣ ಗಮನ ಸೆಳೆಯಿತು. 
ಜಿಲ್ಲೆ

ಕಲಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

Chamarajanagar

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಕಾಂತರಾಜು ಅಭಿಮತ

ಯಳಂದೂರು: ಪ್ರತಿಭಾ ಕಾರಂಜಿ ಮಕ್ಕಳ ಕಲಾ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಕಾಂತರಾಜು ಸಲಹೆ ನೀಡಿದರು.


ತಾಲೂಕಿನ ವೈ.ಕೆ.ಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ದುಗ್ಗಹಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಮಕ್ಕಳು ಪಟ್ಟಣದ ಖಾಸಗಿ ಶಾಲೆ ಮಕ್ಕಳಿಗಿಂತ ಕಡಿಮೆಯಿಲ್ಲ ಎಂಬುದು ಪ್ರತಿಭೆಯಿಂದ ಕಂಡುಬರುತ್ತದೆ. ಓದಿನ ಜತೆಗೆ ಮಕ್ಕಳ ಪ್ರತಿಭೆಗಳ ಅನಾವರಣವೂ ಆಗಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರಕಾಶಿಸುವಂತೆ ಮಾಡುತ್ತದೆ ಎಂದರು.


ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಿ. ಸೋಮಣ್ಣ, ಬಿಆರ್‌ಸಿ ನಾಗೇಂದ್ರ, ನೌಕರರ ಸಂಘದ ಆರ್. ಗೋವಿಂದರಾಜು, ತಾಪಂ ಮಾಜಿ ಸದಸ್ಯ ವೈ.ಕೆ. ಮೋಳೆ ನಾಗರಾಜು, ಗ್ರಾಪಂ ಸದಸ್ಯ ಶಿವರಾಮು, ಸುಜಾತಾ ಸ್ವಾಮಿ ಇತರರು ಹಾಜರಿದ್ದರು.