Oplus_0 
ಜಿಲ್ಲೆ

ಕಲಿಕೆಯಲ್ಲಿ ಹಿಂದುಳಿದವರ ಪಟ್ಟಿ ಮಾಡಿ

ಹೂವಿನಹಡಗಲಿ: ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕಾಗಿ ಯೋಜನೆೆ ರೂಪಿಸಿ ಜಾರಿಗೆ ತರಬೇಕು ಎಂದು ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಬಿಇಒ ಮಹೇಶ್ ಪೂಜಾರ ಸೂಚಿಸಿದರು.

ಪಟ್ಟಣದ ಜಿಪಿಜಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಪ್ರೌಢಶಾಲಾ ಮುಖ್ಯಶಿಕ್ಷಕರ ಸಭೆಯಲ್ಲಿ ಗುರುವಾರ ಮಾತನಾಡಿದರು. ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪಟ್ಟಿ ಮಾಡಿ ಕಲಿಕಾ ಕೌಶಲ್ಯ ವೃದ್ಧಿಸಲು ಕ್ರಮ ಕೈಗೊಳ್ಳಬೇಕು. ಸರಳ ಓದು, ಬರಹ, ಲೆಕ್ಕ ಬಿಡಿಸುವ ಜ್ಞಾನ ಹೆಚ್ಚಿಸುವ ಕೆಲಸ ನಿರಂತರವಾಗಿ ನಡೆಯಬೇಕು. ಸೇತುಬಂಧ ಪರೀಕ್ಷೆ ನಡೆಸಿ ದಾಖಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ತಾಲೂಕಿನ ವಿದ್ಯಾರ್ಥಿನಿ ಲಕ್ಷ್ಮೀ ಬಿದರಹಳ್ಳಿ 625 ಕ್ಕೆ 625 ಅಂಕ ಪಡೆದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಜಿ.ಎಂ.ಕಾಂತೇಶ್, ಪ್ರಭಾರ ಉಪಪ್ರಾಚಾರ್ಯೆ ಜಿ.ಕವಿತಾ, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್.ಮಲ್ಲಿಕಾರ್ಜುನ, ತಾಲೂಕಿನ ಸರ್ಕಾರಿ, ಅನುದಾನಿತ-ಅನುದಾನರಹಿತ, ಮುರಾರ್ಜಿ ವಸತಿ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿದ್ದರು.