ಮೇಲುಕೋಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಂಜೀವಿನಿ ಭವನ ನಿರ್ಮಾಣಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಭೂಮಿಪೂಜೆ ನೆರವೇರಿಸಿದರು. ಗ್ರಾಪಂ ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷ ತಿರುಮಲೆ, ಸದಸ್ಯರಾದ ಜಯರಾಮೇಗೌಡ, ಜಿ.ಕೆ.ಕುಮಾರ್, ಮಣಿಮುರುಗನ್, ಪಿಡಿಒ ರಾಜೇಶ್ವರ್, ಸ್ಥಾನಾಚಾರ್ಯ ತಿರುನಾರಾಯಣ ಅಯ್ಯಂಗಾರ್ ಇತರರು ಇದ್ದರು. 
ಜಿಲ್ಲೆ

ಕಲ್ಯಾಣಿಗಳ ಜೀರ್ಣೋದ್ಧಾರ ಶೀಘ್ರ

ಮೇಲುಕೋಟೆ: ಐತಿಹಾಸಿಕ ಮೇಲುಕೋಟೆಯ ಪುರಾತನ ಕಲ್ಯಾಣಿಗಳನ್ನು ಆಕರ್ಷಣೀಯವಾಗಿ ಜೀರ್ಣೋದ್ಧಾರ ಮಾಡುವ ಯೋಜನೆ ಶೀಘ್ರ ಜಾರಿಗೆ ಬರಲಿದೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು.


ಅವರು ಮೇಲುಕೋಟೆ ಗ್ರಾಪಂ ಕಚೇರಿ ಆವರಣದಲ್ಲಿ ಸಂಜೀವಿನಿ ಭವನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಸಚಿವನಾಗಿದ್ದ ವೇಳೆ ಮೇಲುಕೋಟೆ ಕಲ್ಯಾಣಿಗಳ ಜೀರ್ಣೋದ್ಧಾರಕ್ಕೆ ಮಾಸ್ಟರ್ ಪ್ಲ್ಯಾನ್ ಸಿದ್ಧಮಾಡಿ 32 ಕೋಟಿ ರೂ. ಮೀಸಲಿರಿಸಲಾಗಿತ್ತು. ಇದೀಗ ಮೊದಲ ಕಂತಾಗಿ 16 ಕೋಟಿ ರೂ. ಬಿಡುಗಡೆಯಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರವೇ ಕೆಲಸ ಆರಂಭಿಸಲಾಗುತ್ತದೆ ಎಂದರು.


ಮೇಲುಕೋಟೆಯ ಸಮಗ್ರ ಅಭಿವೃದ್ದಿ ಕಾರ್ಯಗಳಿಗೆ ಮುಂದಿನ ತಿಂಗಳು ಅನುಮೋದನೆ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ವಾಗ್ದಾನ ಮಾಡಿದ್ದಾರೆ. ಗ್ರಾಪಂ ಪ್ರತಿನಿಧಿಗಳು ಮತ್ತು ನಾಗರಿಕರು ಅಭಿವೃದ್ಧಿ ಕಾರ್ಯಕ್ಕೆ ಕೈಜೋಡಿಸಬೇಕು ಎಂದರು


ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷ ತಿರುಮಲೆ, ಸದಸ್ಯರಾದ ಜಯರಾಮೇಗೌಡ, ಜಿ.ಕೆ.ಕುಮಾರ್, ಮಣಿಮುರುಗನ್, ಪಿಡಿಒ ರಾಜೇಶ್ವರ್, ಸ್ಥಾನಾಚಾರ್ಯ ತಿರುನಾರಾಯಣ ಅಯ್ಯಂಗಾರ್, ಸಂಜೀವಿನಿ ಒಕ್ಕೂಟದ ಸದಸ್ಯರು ಇದ್ದರು.