ಮೈಸೂರು: ನಗರದ ಕೆ.ಆರ್.ಆಸ್ಪತ್ರೆಯಲ್ಲಿ 4 ಲಕ್ಷ ರೂ. ಮೌಲ್ಯದ ಸ್ಕಾೃನಿಂಗ್‌ಗೆ ಬಳಸುವ ಯಂತ್ರವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ದೇವರಾಜ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಸ್ಪತ್ರೆಯಲ್ಲಿ ಸ್ಕಾೃನಿಂಗ್ ಮಾಡಲು ಅಳವಡಿಸಿದ್ದ ಪ್ರೆಷರ್ ಇಂಜೆಕ್ಟರ್ ಮಾನಿಟರ್ ಟ್ಯಾಬ್ ಕಳ್ಳತನವಾಗಿತ್ತು. ಸೆ.13ರಂದು ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರವನ್ನು ಕಲೆ ಹಾಕಿ ಆರೋಪಿಯನ್ನು ಬಂಧಿಸಿದ್ದಾರೆ.