ಕಾಗವಾಡ: ತಾಲೂಕಿನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳ್ಳರನ್ನು ಹಿಡಿಯಲು ವಿಶೇಷ ತಂಡ ರಚಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವಕುಮಾರ ಪಾಟೀಲ ಹೇಳಿದರು.ಕಾಗವಾಡ ಪೊಲೀಸ್ ಠಾಣೆಗೆ ಭಾನುವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ ಆಗಿರುವ ಕಳ್ಳತನ ಪ್ರಕರಣಗಳನ್ನು ಭೇದಿಸಲು ಈಗಾಗಲೇ ಹಲವಾರು ಕ್ರಮ ಕೈಗೊಳ್ಳಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದರು. 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪೊಲೀಸ್ ಠಾಣೆ ಕಟ್ಟಡ ಹಾಗೂ ವಸತಿ ಗೃಹಗಳ ಕಾಮಗಾರಿ ವೀಕ್ಷಿಸಿ, ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. ಅಥಣಿ ಡಿವೈಎಸ್‌ಪಿ ಎಸ್.ವಿ. ಗಿರೀಶ, ಸಿಪಿಐ ಶಂಕರಗೌಡ ಬಸನಗೌಡರ, ಪಿಎಸ್‌ಐ ಬಿ.ಎಂ. ರಬಕವಿ, ಮುಖಂಡರಾದ ಸಂಜಯ ತಳವಳಕರ, ಸಚಿನ ಪೂಜಾರಿ ಇದ್ದರು.