ಚಿಕ್ಕಮಗಳೂರು: ಜಿಲ್ಲಾ ಮಟ್ಟದ ಇಪತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಾ. ೭ ಮತ್ತು ೮ರಂದು ತರೀಕೆರೆಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಚಿಕ್ಕಮಗಳೂರು ಕಸಾಪ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಅವರನ್ನು ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕಸಾಪ ತಾಲೂಕು ಅಧ್ಯಕ್ಷ ಮಾವಿನಕೆರೆ ದಯಾನಂದ್, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ, ಕೋಶಾಧ್ಯಕ್ಷೆ ಆಶಾರಾಜು, ನಗರಾಧ್ಯಕ್ಷ ಸಚಿನ್, ತಾಲೂಕು ನಿಕಟಪೂರ್ವ ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್ ಉಪಸ್ಥಿತರಿದ್ದರು.