ಜಿಲ್ಲೆ

ಕಾಂಗ್ರೆಸ್ ಕಚೇರಿಯಲ್ಲಿ ಜಯಂತಿ ಆಚರಣೆ

ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಕ್ತ ಶ್ರೇಷ್ಟ ಕನಕದಾಸರ 537ನೇ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆರವಿಕುಮಾರ್ ಮಾತನಾಡಿ, ಸಮಾಜ ಸುಧಾರಣೆಗೆ ದುಡಿದ ಮಹಾನ್ ವ್ಯಕ್ತಿಗಳನ್ನು ಒಂದು ಸಮುದಾಯಕ್ಕೆ ಸೀಮಿತವಾಗಿಸಬಾರದು. ಅವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕನಕದಾಸರು ರಚಿಸಿರುವ ಕೃತಿಗಳನ್ನು ಓದುವ ಮೂಲಕ ಕನಕದಾಸರ ಆದರ್ಶಗಳನ್ನು ಅವರ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಾಸಕ ಪುಟ್ಟರಂಗಶೆಟ್ಟಿ, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಕೆರಹಳ್ಳಿ ನವೀನ್, ಎಪಿಎಂಸಿ ಅದ್ಯಕ್ಷ ಸೋಮೇಶ್, ಕಾಗಲವಾಡಿ ಚಂದ್ರು, ಸೇವಾದಳ ನಾಗರಾಜು, ಶೇಷಣ್ಣ ಹಾಗೂ ಇತರರು ಹಾಜರಿದ್ದರು.