ಜಿಲ್ಲೆ

ಕಾಂಗ್ರೆಸ್ ಕಛೇರಿಯಲ್ಲಿ ಜಿ. ಪರಮೇಶ್ವರ್ 72ನೇ ಜನ್ಮ ದಿನಾಚರಣೆ

ಹಾಸನ: ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ 72ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಸಿ.ಘಟಕದಿಂದ ಭಾನುವಾರ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ರಾಜ್ಯಸಭ ಮಾಜಿ ಸದಸ್ಯ ಹೆಚ್.ಕೆ. ಜವರೇಗೌಡ ಮಾತನಾಡಿ, ಸುಮಾರು ಏಳು ವರ್ಷಗಳ ದೀಘವಧಿಕಾಲವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಹಾಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಜಿ. ಪರಮೇಶ್ವರ್ ರವರ 72ನೇ ವರ್ಷದ ಜನ್ಮದಿನವನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಜಿಲ್ಲಾ ಪಕ್ಷದ ಕಛೇರಿಯಲ್ಲಿ ಸರಳವಾಗಿ ಆಚರಣೆ ಮಾಡಲಾಗಿದೆ ಎಂದರು.

ಪ್ರಥಮ ಬಾರಿಗೆ ರಾಜ್ಯದಲ್ಲಿ ಹೆಚ್ಚಿನ ಅವಧಿಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ದಕ್ಷತ, ಪ್ರಾಮಾಣಿಕೆಯಿಂದ ಪಕ್ಷವನ್ನು ಕಟ್ಟಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ಇನ್ನು ದೊಡ್ಡ ಮಟ್ಟದ ಅಧಿಕಾರ ಸಿಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ವಕ್ತಾರ ದೇವರಾಜೇಗೌಡ, ಹೆಚ್.ಪಿ. ಮೋಹನ್, ಎಸ್.ಸಿ. ಘಟಕದ ಅಧ್ಯಕ್ಷ ಮಲ್ಲಿಗೆವಾಳ್ ದೇವಪ್ಪ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಂಜಿತ್ ಗೊರೂರು, ನಾಯಕರಹಳ್ಳಿ ಅಶೋಕ್, ಶೇಖರಪ್ಪ ಇತರರು ಉಪಸ್ಥಿತರಿದ್ದರು.