ಜಿಲ್ಲೆ

ಕಾಂಗ್ರೆಸ್ ಗೆಲುವಿಗೆ ಶ್ರಮಿಸುತ್ತೇವೆ

ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ನಾನು ಸೇರಿ 14 ಕಾಂಗ್ರೆಸ್ ಟಿಕೆಟ್ ಬಯಸಿ ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದೇವೆ. ಎಲ್ಲ ರೂ ಒಂದಾಗಿ ಪಕ್ಷದ ಪ್ರಚಾರ ಮಾಡುತ್ತೇವೆ, ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಗೆಲುವಿಗೆ ಶ್ರಮಿಸುವುದಾಗಿ ಮಾಜಿಎಂಎಲ್‌ಸಿ ಜಿ.ರಘು ಆಚಾರ್ ಹೇಳಿದರು.

ನಗರದಲ್ಲಿ ಶನಿವಾರ ನೀಲಕಂಠೇಶ್ವರ ದೇವಾಲಯದಲ್ಲಿ ಪತ್ನಿ,ಪುತ್ರನೊಂದಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 45 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದರು.

ನಂತರ ಆಚಾರ್ ಮೆ ದೇಹಳ್ಳಿ ಶ್ರೀ ಅಯ್ಯಪ್ಪ ದೇವಾಲಯಕ್ಕೆ ತೆರಳಿ 55 ಗ್ರಾಂ.ಚಿನ್ನಾಭರಣವನ್ನು ಸ್ವಾಮಿಗೆ ಸಮರ್ಪಿಸಿದರು.