ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ ಹಾಗೂ ಜನ ವಿರೋಧಿ ನೀತಿ ಅನುರಿಸುರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಭವನ ಎದುರು ಶನಿವಾರ ಪ್ರತಿಭಟನೆ ನಡೆಸಿದೆ.
ಪ್ರತಿಭಟನಾ ಮರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಬಳಿಕ ಎಸಿ ಶ್ವೇತಾ ಬಿಡಿಕರ ಮೂಲಕ ರಾಜ್ಯಪಾಲ ಥಾವರಚಂದ ಗೆಲ್ಹೂಟ್ ಅವರಿಗೆ ಮನವಿ ಸಲ್ಲಿಸಿದರು.
ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಮಾತನಾಡಿ, ಸುಳ್ಳು ಭರವಸೆ ನೀಡಿ ಅಽಕಾರಕ್ಕೆ ಬಂದ ಕಾಂಗ್ರೆಸ್ ಸದನದಲ್ಲಿ ಬಿಜೆಪಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಲು ಹೆಣಗಾಡುತ್ತಿದೆ. ತನ್ನ ಲೋಪದೋಷ ಮುಚ್ಚಿಕೊಳ್ಳಲು ಅಧಿವೇಶನದಲ್ಲಿ ಬಿಜೆಪಿಯ ಹತ್ತು ಶಾಸಕರನ್ನು ಅಮಾನತ್ತುಗೊಳಿಸುವುದರ ಹಿಂದೆ ಕಾಂಗ್ರೆಸ್ ಸರ್ವಾಧಿಕಾರಿ , ಸಂವಿಧಾನ ವಿರೋಧಿ ಧೋರಣೆ ಪ್ರದರ್ಶನವಾಗಿದೆ. ರಾಜ್ಯದ ಜನ ಇದನೆಲ್ಲ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಮಾಜಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ನಿತ್ಯವು ಒಂದಿಲ್ಲೊಂದು ಕ್ರೇಂ ನಡೆಯುತ್ತಿದೆ. ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಉಚಿತ ಕೊಡುಗೆ ನೀಡುತ್ತೇವೆ ಅಂತ ಅಽಕಾರಕ್ಕೆ ಬಂದ ಕಾಂಗ್ರೆಸ್ ಈಗ ಕಂಡಿಷನ್ ಹಾಕುತ್ತಿದೆ. ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನ ಪರ ಯೋಜನೆಗಳನ್ನು ರದ್ದುಗೊಳಿಸಿದೆ. ಬಡವರು, ಹಿಂದುಳಿದವರಿಗೆ ನ್ಯಾಯಯುತವಾಗಿ ಸಿಗಬೇಕಿದ್ದ ಸೌಲಭ್ಯ ಕಸಿದುಕೊಂಡಿದೆ. ಇಂತಹ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಚೆಗೆ ಬೆಂಗಳೂರಿನಲ್ಲಿ ನಡೆದ ಈ ದೇಶದ ವಿರೋಧ ಪಕ್ಷದ ನಾಯಕರಗಳ ಸಭೆಗೆ ಆಗಮಿಸಿದ ವಿವಿಧ ಪಕ್ಷದ ನಾಯಕರಗಳನ್ನು ಸ್ವಾಗತಿಸುವ ಅಥಿತ್ಯದ ಜವಾಬ್ದಾರಿಯನ್ನು ಈ ರಾಜ್ಯದ ೩೦ ಜನ ಐಎಎಸ್ ಅಧಿಕಾರಿಗಳಿಗೆ ವಹಿಸಿ ಶಿಷ್ಟಾಚಾರವನ್ನು ಬಳಸಿಕೊಂಡು ಆಡಳಿತ ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಽ ನಡೆಯನ್ನು ಖಂಡಿಸಿ ವಿಧಾನಸಭೆ ಅಧಿವೇಶನ ಮುಗಿಯುವವರೆಗೂ ಬಿಜೆಪಿ ಹತ್ತು ಶಾಸಕರನ್ನು ಅಮಾನತು ಮಾಡಿದ ಸಭಾಪತಿ ಯು.ಟಿ.ಖಾದರ್ ಅವರ ನಡೆ ಖಂಡನೀಯ ಎಂದುರು.
ಮಾಜಿ ಸಚಿವ ಮುರುಗೇಶ ನಿರಾಣಿ, ವಿ.ಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಉಪಾಧ್ಯಕ್ಷ ರಾಜು ರೇವಣಕರ, ಸತ್ಯನಾರಾಯಣ ಹೇಮಾದ್ರಿ, ಬಸವರಾಜ ಯಂಕಂಚಿ, ಗುಂಡುರಾವ ಶಿಂಧೆ, ರಾಜು ಮುದೇನೂರ, ಸುರೇಶ ಕೊಣ್ಣೂರ ಸೇರಿದಂತೆ ನಗರಸಭೆ ಸದಸ್ಯರು, ಕಾರ್ಯಕರ್ತರು ಇದ್ದರು.