ಜಿಲ್ಲೆ

ಕಾಂಗ್ರೆಸ್ ಜಿಲ್ಲಾ ಎಸ್.ಟಿ. ಘಟಕಕ್ಕೆ ರಾಕೇಶ ಅಧ್ಯಕ್ಷ

ಬೀದರ್: ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಭಾಲ್ಕಿ ತಾಲ್ಲೂಕಿನ ಕುರುಬಖೇಳಗಿಯ ಯುವ ಮುಖಂಡ ರಾಕೇಶ ಚನ್ನಪ್ಪನೋರ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರ ಶಿಫಾರಸಿನ ಮೇರೆಗೆ ಪಕ್ಷದ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕೂಡಲೇ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ರಾಕೇಶ ಅವರು ಒಂದೂವರೆ ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ವಿವಿಧ ಹುದ್ದೆಗಳಲ್ಲಿ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿದ್ದಾರೆ. ಅವರ ಸಂಘಟನಾ ಕೌಶಲಕ್ಕೆ ಇದೀಗ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಹುದ್ದೆ ಒಲಿದು ಬಂದಿದೆ.