ಸಿದ್ದಾಪುರ: ಮಾಲ್ದಾರೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷೆಯಾಗಿ ಮಾಲಾತಿ ಚುನಾಯಿತರಾದರೆ, ಉಪಾಧ್ಯಕ್ಷರಾಗಿ ಜಿ. ಬಿ.ಕುಂಜ್ಞಣ್ಣ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 18 ಸದಸ್ಯ ಬಲವಿರುವ ಪಂಚಾಯಿತಿಯಲ್ಲಿ 6 ಬಿಜೆಪಿ, 11 ಕಾಂಗ್ರೆಸ್ ಬೆಂಬಲಿತರು ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿಗೆ ಮೀಸಲಾಗಿತ್ತು.
ಮತದಾನದಲ್ಲಿ ಬಿಜೆಪಿ ಬೆಂಬಲಿರ ಸರಸ್ವತಿ ಅವರಿಗೆ 06 ಮತ, ಕಾಂಗ್ರೆಸ್ ಬೆಂಬಲಿತ ಮಾಲತಿ ಅವರಿಗೆ 10 ಮತ ಲಭಿಸಿತು. ಇಬ್ಬರು ಕಾಂಗ್ರೆಸ್ ಬೆಂಬಲಿತ ಸದಸ್ಯರು ಮತದಾನಕ್ಕೆ ಗೈರಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಜಿ. ಬಿ.ಕುಂಜ್ಞಣ್ಣ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಕಾರ್ಯದರ್ಶಿ ಲಿಂಗರಾಜು, ಕಾಂಗ್ರೆಸ್ ವಲಯ ಅಧ್ಯಕ್ಷ ಸಾಜೀ ತೋಮಸ್, ಗಣೇಶ್, ಮಣಿ, ಮಂಜು, ಇಂದಿರಾ, ಗಿರೀಶ್‌ಕುಮಾರ್ ಇತರರಿದ್ದರು.